ಶಿವಮೊಗ್ಗ, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಅ. 10 ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ನ್ನು “ಹಿರಿಯ ನಾಗಕರಿಕರು; ನಮ್ಮ ಆಶೋತ್ತರಗಳು, ನಮ್ಮ ಯೋಗಕ್ಷೇಮ ಮತ್ತು ಹಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು ” ಎಂಬ ಘೋಷವಾಕ್ಯದಡಿ ಆಚರಿಸಲಾಗುತ್ತಿದೆ.
ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa