ವಿಜಯಪುರ, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಯುವನಿಧಿ ಯೋಜನೆಯಡಿ ನೊಂದಾಯಿಸಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಹಾಗೂ ಪಡೆದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿಯನ್ನು ಪಡೆಯಲು kaushalkar.com ಪೋರ್ಟಲ್‍ನಲ್ಲಿ ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.
ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ತರಬೇತಿ ಪಡೆಯಲು ನೊಂದಾಯಿಸಿಕೊಳ್ಳಬೇಕು. ಪೋರ್ಟಲ್‍ನಲ್ಲಿ ನೊಂದಾಯಿಸಿಕೊಳ್ಳುವುದರಿಂದ ಪ್ರಸ್ತುತ ತಾವು ಪಡೆಯುತ್ತಿರುವ ನಿರುದ್ಯೋಗ ಭತ್ಯೆ ಯಾವುದೇ ಕಾರಣಕ್ಕಾಗಿ ಸ್ಥಗಿತಗೊಳ್ಳವುದಿಲ್ಲ ಮತ್ತು ಈ ಕುರಿತು ಅಭ್ಯರ್ಥಿಗಳು ಆತಂಕಪಡುವ ಅವಶ್ಯಕತೆ ಇಲ್ಲ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ ಹತ್ತಿರ, ಬಾಗಲಕೋಟ ರಸ್ತೆ, ವಿಜಯಪುರ ದೂ: 08352-297019 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande