ನರಹರಿ ಅಂತಿಮ ದರ್ಶನ ಪಡೆದ ಅಶೋಕ
ಬೆಂಗಳೂರು, 8 ಅಕ್ಟೋಬರ್ (ಹಿ.ಸ.): ಆ್ಯಂಕರ್: ವಿಧಾನ ಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೃ. ನರಹರಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ನರಹರಿಯವ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾ
Ashok


ಬೆಂಗಳೂರು, 8 ಅಕ್ಟೋಬರ್ (ಹಿ.ಸ.):

ಆ್ಯಂಕರ್:

ವಿಧಾನ ಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೃ. ನರಹರಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ನರಹರಿಯವ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅಶೋಕ ಅವರು ಸಂಪೂರ್ಣ ಜೀವನವನ್ನು ರಾಷ್ಟ್ರಸೇವೆಗಾಗಿ ಅರ್ಪಿಸಿದ ಕೃ.ನರಹರಿ ಅವರ ಅಗಲಿಕೆ ಸಂಘ ಪರಿವಾರಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಹಲವು ದಶಕಗಳ ಕಾಲ ಅತ್ಯಂತ ಕ್ರಿಯಾಶೀಲ ಸಂಘಟಕರಾಗಿ ಅಸಂಖ್ಯಾತ ಯುವಕರಲ್ಲಿ ರಾಷ್ಟ್ರೀಯತೆಯ ಬೀಜವನ್ನು ಬಿತ್ತಿ ಅವರನ್ನು ರಾಷ್ಟ್ರಸೇವೆಗಾಗಿ ಅಣಿಗೊಳಿಸಿದ ಅವರ ಬದ್ಧತೆ ಮತ್ತು ಕರ್ತೃತ್ವ ಶಕ್ತಿ ನಮ್ಮೆಲ್ಲರಿಗೂ ಸದಾ ಸ್ಫೂರ್ತಿಯಾಗಿರಲಿದೆ ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande