ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ.ಕೆ ಆಯ್ಕೆ
ಬೆಂಗಳೂರು, 08 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರಿನ ರಾಜ್ಯಾಧ್ಯಕ್ಷರಾದ ಎಸ್.ಷಡಾಕ್ಷರಿಯವರು ಬಸವರಾಜ. ಕೆ. ಹಿರಿಯ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿಜಯನಗರ ಜಿಲ್ಲೆ, ಇವರನ್ನು ರಾಜ್ಯ ಸಂಘದ “ರಾಜ್ಯ ಸಂಘಟನಾ ಕಾರ್ಯದರ್ಶಿ”
ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ “ಬಸವರಾಜ.ಕೆ” ಆಯ್ಕೆ


ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ “ಬಸವರಾಜ.ಕೆ” ಆಯ್ಕೆ


ಬೆಂಗಳೂರು, 08 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರಿನ ರಾಜ್ಯಾಧ್ಯಕ್ಷರಾದ ಎಸ್.ಷಡಾಕ್ಷರಿಯವರು ಬಸವರಾಜ. ಕೆ. ಹಿರಿಯ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿಜಯನಗರ ಜಿಲ್ಲೆ, ಇವರನ್ನು ರಾಜ್ಯ ಸಂಘದ “ರಾಜ್ಯ ಸಂಘಟನಾ ಕಾರ್ಯದರ್ಶಿ” ನಾಮನಿರ್ದೇಶನ ಮಾಡಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಿದ್ದಾರೆ.

ರಾಜ್ಯದ ಸಮಸ್ತ ನೌಕರರಿಗೆ ಆರೋಗ್ಯ ಸಂಜೀವಿನಿ ಜಾರಿಗೆ ತರಲು ಶ್ರಮಿಸಿದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರನ್ನು ವಿಜಯನಗರ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧ್ಯಕ್ಷರಾದ ಜಿ.ಮಲ್ಲಿಕಾರ್ಜುನಗೌಡ ಹಾಗೂ ಪದಾಧಿಕಾರಿಗಳು ಅಭಿನಂಧಿಸಿ ನೂತನ ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಕೆ.ಜಿ.ಐ.ಡಿ. ಕಛೇರಿ, ಜಿಲ್ಲಾ ತರಬೇತಿ ಸಂಸ್ಥೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕಛೇರಿ ಆರಂಭಿಸಲು ಸರ್ಕಾರಕ್ಕೆ ಒತ್ತಾಯಿಸಬೇಕೆಂದು ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ, ರಾಜ್ಯ ಉಪಾಧ್ಯಕ್ಷ ಡಾ.ಸದಾನಂದ ನೆಲಕುದುರಿ, ವಿಜಯನಗರ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನಗೌಡ, ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande