ಬಳ್ಳಾರಿ, 08 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ ಇವರ ಆದೇಶದಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 01 ರಿಂದ ಅಕ್ಟೋಬರ್ 07 ರ ವರೆಗೆ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಿದ್ದ “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನವು ಯಶಸ್ವಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಈ ವಿಶೇಷ ಅಭಿಯಾನದಲ್ಲಿ ವೈವಾಹಿಕ ವಿವಾದಗಳು, ಅಪಘಾತ ಪರಿಹಾರ ಪ್ರಕರಣಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಅಪರಾಧಿಕ ರಾಜೀಯಾಗಬಹುದಾದ ಪ್ರಕರಣಗಳು, ಪಾಲು ವಿಭಾಗ ದಾವೆಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳು ಸೇರಿದಂತೆ ಸುಮಾರು 117 ಪ್ರಕರಣಗಳು ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಂಡಿವೆ.
ಈ “ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ” 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಯಶಸ್ವಿಗೆ ಸಹಕರಿಸಿದ ಜಿಲ್ಲಾ ನ್ಯಾಯಾಂಗ, ವಕೀಲರು, ಕಕ್ಷಿದಾರರು, ಮಧ್ಯಸ್ಥಿಕೆದಾರರು ಮತ್ತು ಸಾರ್ವಜನಿಕರಿಗೆ ಅಭಿನಂದನೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್