ಬೆಂಗಳೂರು, 08 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗಂಗಾವತಿ ನಗರದ ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಆಪ್ತನಾಗಿದ್ದ ಜುಲೈ ನಗರ ನಿವಾಸಿ ಜೆ. ವೆಂಕಟೇಶ (34) ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಬಂದು, ಕಾರಿನ ಬಾಗಿಲಿನಿಂದ ಡಿಕ್ಕಿ ಹೊಡೆದು ನೆಲಕ್ಕೆ ಬೀಳಿಸಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಆರೋಪಿಗಳ ಬಂಧನಕ್ಕೆ ಪೊಲೀಸರು ತಂಡಗಳನ್ನು ರಚಿಸಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಗಂಗಾವತಿ ನಗರದ ರಾಯಚೂರು ರಸ್ತೆಯ ರಿಲೈನ್ಸ್ ಮಾರ್ಟ್ ಹತ್ತಿರ ಈ ಘಟನೆ ನಡೆದಿದೆ.
ಮಂಗಳವಾರ ರಾತ್ರಿ ಅಥವಾ ಬುಧವಾರ ನಸುಕಿನ 1 ಗಂಟೆಯ ಸುಮಾರಿಗೆ ಜೆ. ವೆಂಕಟೇಶ್ ಬೈಕ್‍ನಲ್ಲಿ ಹೊರಟಿದ್ದಾಗ
4-5 ಜನ ಯುವಕರ ತಂಡ ಕಾರಿನಲ್ಲಿ ಬಂದು, ಕಾರಿನ ಬಾಗಿಲನ್ನು ತೆಗೆದು, ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಆತನನ್ನು ನೆಲಕ್ಕೆ ಬೀಳಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಸ್ಥಳದಲ್ಲಿ ಬೆಂಗಳೂರು ನೋಂದಣಿ ಸಂಖ್ಯೆಯ ಕಾರ್ ನಿಂತಿದ್ದೆ. ಅಲ್ಲದೇ, ಕಾರಿನಲ್ಲಿ ಮಾರಕಾಸ್ತ್ರಗಳು ಇದ್ದಿದ್ದು ಕೊಲೆಯ ಭೀಕರತೆಯನ್ನು ಕಂಡು ಗಂಗಾವತಿ ನಗರವು ಬೆಚ್ಚಿ ಬಿದ್ದಿದೆ. ಆದರೆ, ಕೊಲೆಗೆ ನಿಖರವಾದ ಕಾರಣ ತಿಳಿದಿಲ್ಲ.
ಕೊಲೆಯ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ಅರಸಿದ್ದಿ ಅವರು ನಸುಕಿನಲ್ಲಿಯೇ ಗಂಗಾವತಿ ಸೇರಿದ್ದು, ಕೊಲೆ ಪ್ರಕರಣದ ತನಿಖೆಯ ಪ್ರತಿ ಹಂತವನ್ನೂ ಗಮನಿಸುತ್ತ, ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚನೆ ಮಾಡಿ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದಾರೆ.
ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ