ಅ. 10 ರಂದು ಹೊಸಪೇಟೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ
ಕೊಪ್ಪಳ, 08 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 10 ರಂದು ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್
ಅ. 10 ರಂದು ಹೊಸಪೇಟೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ


ಕೊಪ್ಪಳ, 08 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 10 ರಂದು ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ, ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ಘನ ಉಪಸ್ಥಿತಿ ವಹಿಸುವರು. ವಿಜಯನಗರ ಕ್ಷೇತ್ರದ ಶಾಸಕರಾದ ಹೆಚ್.ಆರ್. ಗವಿಯಪ್ಪ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದರಾದ ಈ.ತುಕಾರಾಮ್, ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಹಗರಿಬೊಮ್ಮನಹಳ್ಳಿ ಶಾಸಕರಾದ ಕೆ. ನೇಮಿರಾಜ ನಾಯ್ಕ, ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಕೂಡ್ಲಿಗಿ ಶಾಸಕರಾದ ಡಾ.ಶ್ರೀನಿವಾಸ್ ಎನ್.ಟಿ., ಹಡಗಲಿ ಶಾಸಕರಾದ ಎಲ್.ಕೃಷ್ಣ ನಾಯಕ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ಹರಪನಹಳ್ಳಿ ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕರುಗಳಾದ ಡಾ. ಚಂದ್ರಶೇಖರ ಬಿ. ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ್ ಎನ್., ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ. ಪಟೇಲ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಶ್ರೀನಿವಾಸ್ ಗುಪ್ತಾ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ವಿಜಯನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶಿವಮೂರ್ತಿ ಕೆ., ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಲಿಂಗರಾಜ ಎಸ್.ಎಸ್., ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಕೊಪ್ಪಳ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಜಯನಗರ ವಿಭಾಗದ ಹಿರಿಯ ಪರಿಸರ ಅಧಿಕಾರಿ ಬಿ.ಎಸ್. ಮುರಳೀಧರ ಅವರು ಉಪಸ್ಥಿತರಿರುವರು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳ ಪ್ರಾದೇಶಿಕ ಕಛೇರಿಯ ಪರಿಸರ ಅಧಿಕಾರಿ ಹರಿಶಂಕರ್ ವೈ.ಎಸ್. ಹಾಗೂ ವಿಜಯನಗರ ಪ್ರಾದೇಶಿಕ ಕಛೇರಿಯ ಪರಿಸರ ಅಧಿಕಾರಿ ಹೆಚ್.ಎ.ಮೀನಾಕ್ಷಿ ಅವರು ಜಂಟಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande