ಬಳ್ಳಾರಿ, 08 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅ.10 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಆರ್.ಪಾಟೀಲ ಮತ್ತು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜ ಅವರು ಘನ ಉಪಸ್ಥಿತರಿರುವರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಆಗಿರುವ ಮಳವಳ್ಳಿ ವಿಧಾನ ಸಭಾ ಕ್ಷೇತ್ರ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಮಸ್ಕಿ ಶಾಸಕರು ಆರ್.ಬಸನಗೌಡ ತುರುವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಹಾಗೂ ಬೀಳಗಿ ಶಾಸಕ ಜೆ.ಟಿ ಪಾಟೀಲ್, ಬಳ್ಳಾರಿ ಸಂಸದ ಈ.ತುಕಾರಾಮ್, ಕೊಪ್ಪಳ ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಯಚೂರು ಸಂಸದ ಜಿ.ಕುಮಾರ ನಾಯಕ, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ರಾಯಚೂರು ನಗರ ಶಾಸಕ ಡಾ.ಎಸ್.ಶಿವರಾಜ್ ಪಾಟೀಲ್, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಮಾನವಿ ಶಾಸಕ ಜಿ.ಹಂಪಯ್ಯ ನಾಯಕ, ಲಿಂಗಸುಗೂರು ಶಾಸಕ ಮಾನಪ್ಪ ಡಿ.ವಜ್ಜಲ್, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕ ಶಶೀಲ್ ಜಿ.ನಮೋಶಿ, ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ವಿಧಾನಪರಿಷತ್ ಶಾಸಕರಾದ ಶರಣಗೌಡ ಪಾಟೀಲ್ ಬಯ್ಯಾಪೂರ, ಎ.ವಸಂತ ಕುಮಾರ, ಬಸನಗೌಡ ಬಾದರ್ಲಿ, ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇತರರು ಭಾಗವಹಿಸುವರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಎಸ್.ಎಸ್.ಲಿಂಗರಾಜ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್, ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ರಾಯಚೂರು ಜಿಲ್ಲಾಧಿಕಾರಿ ಕೆ.ನಿತೀಶ್, ಬಳ್ಳಾರಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ, ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಾ.ಶೋಭಾರಾಣಿ ವಿ.ಜೆ., ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟ ಮಾದಯ್ಯ, ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬೀನ್ ಮೊಹಪಾತ್ರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಜಯನಗರ ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳಿಧರ, ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು, ರಾಯಚೂರು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಶೈಲಕಾ ಅಮೀನ್ ಗಡ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್