ಬೆಂಗಳೂರು, 8 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಕೆರೆಗಳ ಬಫರ್ ಝೋನ್‌ಗೆ ಸಂಬಂಧಿಸಿದ ತಿದ್ದುಪಡಿ ವಿಧೇಯಕದ ಕುರಿತಂತೆ ಕಾನೂನು ತಜ್ಞರ ಸಲಹೆಯೊಂದಿಗೆ ಶೀಘ್ರದಲ್ಲೇ ರಾಜ್ಯಪಾಲರಿಗೆ ವಿವರಣೆಯನ್ನು ಸಲ್ಲಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ.
ಈ ಐತಿಹಾಸಿಕ ತಿದ್ದುಪಡಿಯು ವೈಜ್ಞಾನಿಕವಾದ ಅಧ್ಯಯನದ ಮೂಲಕ ಕೈಗೊಳ್ಳಲಾಗಿದೆ. ಬೆಂಗಳೂರು ಮೂಲದ ಸಂಸ್ಥೆಯ ದೂರಿನ ಅನ್ವಯ ರಾಜ್ಯಪಾಲರು ವಿವರಣೆ ಕೇಳಿದ್ದಾರೆ. ಈ ಹಿನ್ನಲೆಯಲ್ಲಿ ಅಗತ್ಯ ವಿವರಣೆಯನ್ನು ಸಲ್ಲಿಸಲಾಗುವುದು.
ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಹಾಗೂ ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳ ಸದಸ್ಯರನ್ನೊಳಗೊಂಡ ಸಮಿತಿಯು ನಿರ್ಧಾರದಂತೆ ತಿದ್ದುಪಡಿ ವಿಧೇಯಕವನ್ನು ಸಿದ್ದಪಡಿಸಿ ಉಭಯ ಸದನಗಳಲ್ಲಿ ಮಂಡಿಸಲಾಗಿತ್ತು. ಇದಕ್ಕೆ ಉಭಯ ಸದನದಲ್ಲೂ ಒಪ್ಪಿಗೆ ದೊರೆತಿದೆ. ದೂರಿನ ಹಿನ್ನಲೆಯಲ್ಲಿ ರಾಜ್ಯಪಾಲರು ವಿವರಣೆ ಕೇಳಿದ್ದು, ಇದಕ್ಕೆ ವಿವರಣೆಯನ್ನು ಸಿದ್ದಪಡಿಸಲಾಗುತ್ತಿದೆ. ಸದ್ಯದಲ್ಲೆ ರಾಜ್ಯಪಾಲರಿಗೆ ವಿವರಣೆಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa