ಬೆಂಗಳೂರು, 8 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಬೆಂಗಳೂರು ನಗರದ 50 ಅಂಗನವಾಡಿ ಕಾರ್ಯಕರ್ತರಿಗೆ ಸುತಾರ ಲರ್ನಿಂಗ್ ಫೌಂಡೇಶನ್ ವತಿಯಿಂದ ಪೊರೈಸಲಾದ ಟ್ಯಾಬ್ ಗಳನ್ನು ವಿತರಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ನಗರದ ಉಪ ನಿರ್ದೇಶಕರಾದ ಸುಮಂಗಲಾ ಮಳಾಪುರ್, ಸುತಾರ ಲರ್ನಿಂಗ್ ಫೌಂಡೇಶನ್‌ನ ಶಂಕರ್ ಸಿಂಗ್, ನವೀನ್ ಎಂ ಎಲ್, ಕಾರ್ತಿಕ್ ಸ್ವಾಮಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa