ಬುಧವಾರದ ರಾಶಿ ಫಲ
ಹುಬ್ಬಳ್ಳಿ, 08 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬುಧವಾರದ ರಾಶಿ ಫಲ *ಮೇಷ ರಾಶಿ.* ಆದಾಯ ಸಾಕಾಗುವುದಿಲ್ಲ. ಉದ್ಯೋಗದಲ್ಲಿ ಪ್ರಮುಖ ದಾಖಲೆಗಳೊಂದಿಗೆ ಜಾಗರೂಕರಾಗಿರಿ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೂರ ಪ್ರಯಾಣದ ಸೂಚನೆಗಳಿವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಬುಧವಾರದ ರಾಶಿ ಫಲ


ಹುಬ್ಬಳ್ಳಿ, 08 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬುಧವಾರದ ರಾಶಿ ಫಲ

*ಮೇಷ ರಾಶಿ.*

ಆದಾಯ ಸಾಕಾಗುವುದಿಲ್ಲ. ಉದ್ಯೋಗದಲ್ಲಿ ಪ್ರಮುಖ ದಾಖಲೆಗಳೊಂದಿಗೆ ಜಾಗರೂಕರಾಗಿರಿ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ದೂರ ಪ್ರಯಾಣದ ಸೂಚನೆಗಳಿವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತವೆ.

*ವೃಷಭ ರಾಶಿ.*

ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗಿನ ವಿವಾದಗಳೊಂದಿಗೆ ದೂರವಿರಬೇಕು. ಪ್ರಯಾಣವನ್ನು ಮುಂದೂಡಲಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳದೇ ಕಿರಿಕಿರಿ ಉಂಟಾಗುತ್ತದೆ. ಹಣಕಾಸಿನ ವ್ಯವಹಾರಗಳು ನಿರುತ್ಸಾಹ ಗೊಳಿಸುತ್ತವೆ. ಹೊಸ ವ್ಯವಹಾರಗಳಲ್ಲಿ ಯೋಚಿಸಿ ಹೂಡಿಕೆ ಮಾಡುವುದು ಉತ್ತಮ.

*ಮಿಥುನ ರಾಶಿ.*

ಆಪ್ತ ಸ್ನೇಹಿತರಿಂದ ಹೊಸ ವಿಷಯಗಳನ್ನು ಸಂಗ್ರಹಿಸುತ್ತೀರಿ. ಮನೆಗೆ ಬಂಧು ಮಿತ್ರರ ಆಗಮನ ಸಂತಸ ತರುತ್ತದೆ. ಸ್ತ್ರೀಯರ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಬೇಕು. ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ.

*ಕಟಕ ರಾಶಿ.*

ಹಳೆ ಸಾಲ ವಸೂಲಿಯಾಗುತ್ತದೆ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಶತ್ರುಗಳೂ ಮಿತ್ರರಾಗಿ ಸಹಾಯ ಸಹಕಾರ ನೀಡುತ್ತಾರೆ. ಸಮಾಜದಲ್ಲಿ ಪ್ರತಿಷ್ಟೆ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವುದರಿಂದ ಅಧಿಕಾರಿಗಳನ್ನು ಮೆಚ್ಚಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.

*ಸಿಂಹ ರಾಶಿ.*

ಪ್ರಮುಖ ವ್ಯವಹಾರಗಳಲ್ಲಿ ಹಿರಿಯರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ದೈವಿಕ ಸೇವೆಗಳಿಗೆ ಹಣವನ್ನು ಖರ್ಚು ಮಾಡುತ್ತೀರಿ. ವ್ಯಾಪಾರ ವಿಸ್ತರಣೆಗೆ ಅಡೆತಡೆಗಳು ಎದುರಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪ ಅನುಕೂಲಕರವಾಗಿರುತ್ತದೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ.

*ಕನ್ಯಾ ರಾಶಿ.*

ಕೈಗೊಂಡ ಕೆಲಸಗಳಲ್ಲಿ ಒತ್ತಡ ಹೆಚ್ಚಾದರು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ದೈವಿಕ ಸೇವಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ವ್ಯಾಪಾರಗಳು ಲಾಭದಾಯಕವಾಗಿ ಸಾಗುತ್ತವೆ. ಹಣದ ವಿಚಾರದಲ್ಲಿ ಇತರರಿಗೆ ಮಾತು ಕೊಡುವ ವಿಚಾರದಲ್ಲಿ ಯೋಚಿಸುವುದು ಉತ್ತಮ.

*ತುಲಾ ರಾಶಿ.*

ಹೊಸ ವ್ಯಾಪಾರ ಆರಂಭಿಸಲು ಅಡೆತಡೆಗಳು ಎದುರಾಗುತ್ತವೆ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿವಾದಗಳಿರುತ್ತವೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಕಡಿಮೆಯಾಗುತ್ತದೆ. ಸಂಗಾತಿಯೊಂದಿಗೆ ದೈವಿಕ ದರ್ಶನವನ್ನು ಪಡೆಯುತ್ತೀರಿ. ವ್ಯಾಪಾರ ವ್ಯವಹಾರಗಳು ಸ್ವಲ್ಪ ನಿಧಾನವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚು ಜಾಗರೂಕರಾಗಿರಿ.

*ವೃಶ್ಚಿಕ ರಾಶಿ.*

ಹಣಕಾಸಿನ ಪರಿಸ್ಥಿತಿ ಅಸ್ತವ್ಯಸ್ತವಾಗಿರುತ್ತದೆ. ವ್ಯರ್ಥ ಖರ್ಚುಗಳ ವಿಚಾರದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಬೇಕು. ನೇತ್ರ ಸಂಬಂಧಿ ಕಾಯಿಲೆಗಳು ನೋವುಂಟು ಮಾಡುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಅನುಕೂಲಕರವಾಗಿರುವುದಿಲ್ಲ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗಿ ಸಾಗುತ್ತವೆ.

*ಧನುಸ್ಸು ರಾಶಿ.*

ಕುಟುಂಬ ಸದಸ್ಯರಿಂದ ನಿರೀಕ್ಷಿತ ಆರ್ಥಿಕ ಸಹಾಯ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹಿರಿಯರ ಸಹಕಾರದಿಂದ ಹೊಸ ಅವಕಾಶಗಳು ದೊರೆಯುತ್ತವೆ. ದೂರ ಪ್ರಯಾಣ ಲಾಭದಾಯಕವಾಗುರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ. ವ್ಯವಹಾರಗಳನ್ನು ವಿಸ್ತರಿಸಿ ಲಾಭವನ್ನು ಪಡೆಯುತ್ತೀರಿ.

*ಮಕರ ರಾಶಿ.*

ವೃತ್ತಿ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗಿನ ಸಮಸ್ಯೆಗಳು ಕಿರಿಕಿರಿ ಉಂಟು ಮಾಡುತ್ತದೆ. ಹಣದ ವಿಷಯದಲ್ಲಿ ಏರಿಳಿತಗಳು ಕಂಡುಬರುತ್ತವೆ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಮಕ್ಕಳ ಶಿಕ್ಷಣದ ಉದ್ಯೋಗ ಪ್ರಯತ್ನಗಳು ನಿರುತ್ಸಾಹಗೊಳಿಸುತ್ತವೆ.

*ಕುಂಭ ರಾಶಿ.*

ವೃತ್ತಿಪರ ವ್ಯಾಪಾರ ಸ್ವಲ್ಪ ಮಟ್ಟಿಗೆ ಅನುಕೂಲಕರವಾಗಿರುತ್ತದೆ. ರಾಜಕೀಯ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಬಾಲ್ಯದ ಸ್ನೇಹಿತರಿಂದ ಅಗತ್ಯಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ . ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನಿಕ ಚಲನೆ ಸೂಚನೆಗಳಿವೆ.

*ಮೀನ ರಾಶಿ.*

ನಿರುದ್ಯೋಗಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ದೂರ ಪ್ರಯಾಣದಲ್ಲಿ ಆತುರ ಒಳ್ಳೆಯದಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳನ್ನು ಅಳವಡಿಸಿಕೊಳ್ಳುತ್ತೀರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ವಿವಾದಗಳಿಂದ ದೂರವಿರುವುದು ಉನ್ನತಮ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಅನುಕೂಲಕರವಾಗಿರುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande