ಒಗ್ಗಟ್ಟು ಇದ್ದರೆ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ:ಪರಮೇಶ್ವರ
ತುಮಕೂರು, 8 ಅಕ್ಟೋಬರ್ (ಹಿ.ಸ.): ಆ್ಯಂಕರ್: ಕಾರ್ಮಿಕ ಇಲಾಖೆ ಹಾಗೂ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಬೆಳಗುಂಬದಲ್ಲಿ ನೂತನವಾಗಿ ನಿರ್ಮಿಸಲಾದ ಕಾರ್ಮಿಕ ಭವನವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,ದೇಶದಲ್ಲಿ ಮೊದಲ ಬಾರಿಗ
Parmesahwar


ತುಮಕೂರು, 8 ಅಕ್ಟೋಬರ್ (ಹಿ.ಸ.):

ಆ್ಯಂಕರ್:

ಕಾರ್ಮಿಕ ಇಲಾಖೆ ಹಾಗೂ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಬೆಳಗುಂಬದಲ್ಲಿ ನೂತನವಾಗಿ ನಿರ್ಮಿಸಲಾದ ಕಾರ್ಮಿಕ ಭವನವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ದೇಶದಲ್ಲಿ ಮೊದಲ ಬಾರಿಗೆ ರಾಜ್ಯ ಕಾರ್ಮಿಕ ಇಲಾಖೆಯು ವೃತ್ತಿಯನ್ನು ಗುರುತಿಸಿ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೀವ ಪಣಕ್ಕಿಟ್ಟು ಕೆಲಸ ಮಾಡುವ ಆಹಾರ ಸೇರಿದಂತೆ ಇತರೆ ವಸ್ತುಗಳ ಡೆಲಿವರಿ ಬಾಯ್‌ಗಳ (ಗಿಗ್ ಕಾರ್ಮಿಕರು) ಸಂಕಷ್ಟದ ಸಂದರ್ಭದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ. ಕಾರ್ಮಿಕ ಸಂಘ, ಸಂಸ್ಥೆಗಳಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ರವರು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್‌ಗೌಡ, ಹೆಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande