ಹೊಸಪೇಟೆ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲಿ ಖಾಲಿ ಇರುವ ಸೀಟುಗಳಿಗೆ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ನಿಲಯಗಳಲ್ಲಿ ಎಲ್ಲಾ ಮೆಟ್ರಿಕ್ ನಂತರದ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್.7 ರೊಳಗಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ http://shp.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿhttp://dom.karnataka.gov.in ವೈಬ್‍ಸೈಟ್‍ನ್ನು ವಿಕ್ಷಿಸಿ, ಜಿಲ್ಲಾ ಕಚೇರಿ, ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ. ಸಹಾಯವಾಣಿ 24X7 ದೂ. 8277799990, ಮೊ.8050435366, 9980237242 ಮತ್ತು 7353696984 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್