ಎಸ್‍ಟಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿ
ಹೊಸಪೇಟೆ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರದ ವತಿಯಿಂದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ದವರು ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯ
ಎಸ್‍ಟಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿ


ಹೊಸಪೇಟೆ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರದ ವತಿಯಿಂದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ದವರು ಜಿಲ್ಲೆಯಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದರು.

ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್.13 ರೊಳಗಾಗಿ ಕರೆ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಷನ್ ಕಾರ್ಡ್‍ಗಳ ಜೆರಾಕ್ಸ್ ಪ್ರತಿಗಳು, 2 ಪಾಸ್‍ಪೆÇೀರ್ಟ್ ಫೆÇೀಟೋಗಳನ್ನು ಸÀಲ್ಲಿಸಬೇಕು. ಅರ್ಜಿ ಸಲ್ಲಿಸುವವರು 18 ವರ್ಷದಿಂದ 40 ವರ್ಷದ ವಯಸ್ಸಿನವರಾಗಿರಬೇಕು. ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ. ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು, ನೊಂದಣೆ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತಿತರ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.6362681190 ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande