ಪ.ಬ.ಬಿಜೆಪಿ ಸಂಸದ ಹಾಗೂ ಶಾಸಕರ ಮೇಲಿನ ಹಲ್ಲೆ ; ಇಬ್ಬರ ಬಂಧನ
ಕೋಲ್ಕತ್ತಾ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಾಗರ್ಕಟ ಪ್ರದೇಶದಲ್ಲಿ ಬಿಜೆಪಿ ಸಂಸದ ಖಗೇನ್ ಮುರ್ಮು ಮತ್ತು ಸಿಲಿಗುರಿ ಶಾಸಕ ಶಂಕರ್ ಘೋಷ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಕ್ಮರಲ್
Arrest


ಕೋಲ್ಕತ್ತಾ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಾಗರ್ಕಟ ಪ್ರದೇಶದಲ್ಲಿ ಬಿಜೆಪಿ ಸಂಸದ ಖಗೇನ್ ಮುರ್ಮು ಮತ್ತು ಸಿಲಿಗುರಿ ಶಾಸಕ ಶಂಕರ್ ಘೋಷ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಕ್ಮರಲ್ ಹಕ್ ಮತ್ತು ಗೋವಿಂದ್ ಶರ್ಮಾ ಎಂದು ಗುರುತಿಸಲಾಗಿದೆ. ಒಬ್ಬರನ್ನು ನಾಗರ್ಕಟದಿಂದ, ಮತ್ತೊಬ್ಬರನ್ನು ಜೈಗಾಂವ್‌ನಿಂದ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಅಹ್ಮದ್ ತಿಳಿಸಿದ್ದಾರೆ.

ಸೋಮವಾರ ಸಂಜೆ ಇಬ್ಬರು ನಾಯಕರು ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಹಾರ ಕಾರ್ಯಗಳನ್ನು ಪರಿಶೀಲಿಸುತ್ತಿದ್ದಾಗ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ದಾಳಿ ಮಾಡಿದರೆಂದು ಬಿಜೆಪಿ ಆರೋಪಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು.

ಪೊಲೀಸರು ದಾಳಿಗೆ ಸಂಬಂಧಿಸಿದ ತನಿಖೆ ಮುಂದುವರೆಸಿದ್ದು, ಉಳಿದ ಆರೋಪಿಗಳ ಶೋಧ ಕಾರ್ಯ ಪ್ರಾರಂಭವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande