ಬಳ್ಳಾರಿ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಳಗಾವಿಯ ರಕ್ಷಣಾ ಇಲಾಖೆಯ ಮರಾಠಾ ಲೈಟ ಇನ್‌ಫಂಟ್ರಿ ಸೆಂಟರ್ ವತಿಯಿಂದ ಅಕ್ಟೋಬರ್ 19 ರಂದು ಬೆಳಿಗ್ಗೆ 8.30 ರಿಂದ ಸಂಜೆ 04 ಗಂಟೆಯವರೆಗೆ ಬೆಳಗಾವಿ ನಗರದ ಶಿವಾಜಿ ಸ್ಟೇಡಿಯಂನಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗಾಗಿ ಸಂಪರ್ಕ ಶಿಬಿರ ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಮಾಜಿ ಸೈನಿಕರ ನಿವೃತ್ತಿ ಪಿಂಚಣಿ, ಕುಟುಂಬ ಪಿಂಚಣಿ, ಸ್ಪರ್ಶ್ ಮತ್ತು ಇಸಿಹೆಚ್‌ಎಸ್ ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳು ತಮ್ಮ ಕುಂದು-ಕೊರತೆ ಕುರಿತು ವಿವರಗಳನ್ನು ನೋಂದಾಯಿಸಿಕೊಂಡು, ನೋಂದಣಿ ಸಂಖ್ಯೆ ಪಡೆಯಬೇಕು.
ನೋಂದಣಿ ಮಾಡಿಸುವ ಫಲಾನುಭವಿಗಳು ತಮ್ಮ ಕುಂದು ಕೊರತೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಮೊಬೈಲ್ (ವಾಟ್ಸಾಪ್) ಸಂಖ್ಯೆ 8317350584, ದೂ.0831-2402821 ಮತ್ತು ಇಮೇಲ್ greatgorilla@nic.in ಗಳ ಮೂಲಕ ಅಪ್‌ಲೋಡ್ ಮಾಡಲು ಅವಕಾಶ ಇರುತ್ತದೆ.
ಹಾಗಾಗಿ ಶಿಬಿರದಲ್ಲಿ ಬಳ್ಳಾರಿ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಶಿಬಿರದಲ್ಲಿ ಪಾಲ್ಗೊಂಡು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಎಂಎಲ್‌ಐಆರ್‌ಸಿ ಅಭಿಲೇಖಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್