ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲು ಕ್ಷಣಗಣನೆ
ಹಾಸನ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವರ್ಷದಲ್ಲಿ ಒಂದು ಬಾರಿ ದರ್ಶನ ನೀಡುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನ 12 ಗಂಟೆ ನಂತರ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹಾಸನಾಂಬೆಯ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಹಾಸನ ನಗರಕ್ಕ
Hasanambe


ಹಾಸನ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವರ್ಷದಲ್ಲಿ ಒಂದು ಬಾರಿ ದರ್ಶನ ನೀಡುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಾಲಯದ ಬಾಗಿಲು ತೆರೆಯಲು ಕ್ಷಣಗಣನೆ ಆರಂಭವಾಗಿದೆ.

ಮಧ್ಯಾಹ್ನ 12 ಗಂಟೆ ನಂತರ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹಾಸನಾಂಬೆಯ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಹಾಸನ ನಗರಕ್ಕೆ ಆಗಮಿಸಿದ್ದಾರೆ.

ಜಿಲ್ಲಾ ಆಡಳಿತದ ಮಾಹಿತಿ ಪ್ರಕಾರ, ಈ ಬಾರಿ ಅಕ್ಟೋಬರ್ 9ರಿಂದ 23ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಭಕ್ತರಿಗೆ ದರ್ಶನ ಸಿಗಲಿದೆ. ಹಾಗೂ ಈ ಭಾರಿ ವಿಐಪಿ ಸಂಸ್ಕೃತ ಕೈ ಬಿಡಲಾಗಿದ್ದು ಗಣ್ಯರಿಗೆ ಸಮಯ ನಿಗದಿ ಮಾಡಿ ಗೋಲ್ಡ್ ಪಾಸ್ ಜಾರಿಗೆ ತಂದಿದೆ.

ಜಾತ್ರೋತ್ಸವದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತವು ಭಕ್ತರ ಸುರಕ್ಷತೆ, ಸಂಚಾರ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ವೈದ್ಯಕೀಯ ಸೇವೆ, ಹಾಗೂ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಹಲವು ಸಿದ್ಧತೆಗಳನ್ನು ಕೈಗೊಂಡಿದೆ.

ಈ ಬಾರಿ ಜಾತ್ರೋತ್ಸವದಲ್ಲಿ ಭಕ್ತರ ಮನರಂಜನೆಗೆ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಮತ್ತು ಜಾನಪದ ಉತ್ಸವ ಸೇರಿದಂತೆ ಅನೇಕ ವಿಶೇಷ ಆಕರ್ಷಣೆಗಳನ್ನು ಆಯೋಜಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande