ಬೆಂಗಳೂರು, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಸರಕಾರದ ಜಾತಿಗಣತಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಂತೆ ಗೊಂದಲ, ಅಯೋಮಯ ಮತ್ತು ಅಜ್ಞಾನದಿಂದ ಕೂಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಾತಿಗಣತಿಗೆ ಸರ್ಕಾರ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ. ಸ್ಪಷ್ಟವಾದ ಉದ್ದೇಶ ಕೂಡ ಇಲ್ಲ. ಅದು ಕೂಡ ರಾಹುಲ್ ಗಾಂಧಿಯಂತೆಯೇ ಎಂದು ಅಶೋಕ ವ್ಯಂಗ್ಯವಾಡಿದ್ದಾರೆ.
ಈಗ ಕಾಂಗ್ರೆಸ್ ಸರ್ಕಾರವು ಜಾತಿ ಗಣತಿಗಾಗಿ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿದೆ. ಇದರಿಂದಾಗಿ ಶಿಕ್ಷಕರು ಗೊಂದಲಮಯ ಜಾತಿ ಗಣತಿಯನ್ನು ನಿಭಾಯಿಸಬಹುದು. ಆದರೆ, ಜನರ ಬಳಿ ಏನು ಕೇಳಬೇಕೆಂಬುದೇ ಗಣತಿದಾರರಿಗೆ ತಿಳಿಯುತ್ತಿಲ್ಲ. ಶಿಕ್ಷಕರನ್ನು ತರಗತಿಗಳಿಂದ ಹೊರಗೆಳೆದು ವಿದ್ಯಾರ್ಥಿಗಳ ಬಾಳಿನಲ್ಲಿ ಕತ್ತಲೆ ಆವರಿಸುವಂತೆ ಮಾಡಲಾಗುತ್ತಿದೆ. ಕಾಂಗ್ರೆಸ್ಸಿನ ವಿಭಜನೆಯ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇವುಗಳನ್ನೆಲ್ಲ ಮಾಡಲಾಗುತ್ತಿದೆ ಎಂದು ಅಶೋಕ್ ಟೀಕಿಸಿದ್ದಾರೆ.ಇದು ಸಮೀಕ್ಷೆ ಅಲ್ಲ, ಇದು ದೋಷಗಳಿಂದ ಕೂಡಿದ ಸರ್ಕಸ್. ಅಧಿಕಾರಕ್ಕೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆಗೆ ಕರ್ನಾಟಕದ ಮಕ್ಕಳು ಬೆಲೆ ತೆರುವಂತಾಗಿದೆ ಎಂದು ಅಶೋಕ್ ಕಿಡಿ ಕಾರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa