ಅಣ್ಣಿಗೇರಿ ಮಳೆ‌ಹಾನಿ ಪ್ರದೇಶಗಳಿಗೆ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಭೇಟಿ
ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ಮಧ್ಯರಾತ್ರಿಯವರೆಗೆ ಅಪಾರ ಪ್ರಮಾಣದ ಮಳೆ ಸುರಿದಿದೆ. ಅಣ್ಣಿಗೇರಿಯ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ, ಸಾರ್ವಜನಿಕರಿಗೆ ತೊಂದರೆ ಆಗಿದ್ದು, ಇಂದು
Visit


ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ಮಧ್ಯರಾತ್ರಿಯವರೆಗೆ ಅಪಾರ ಪ್ರಮಾಣದ ಮಳೆ ಸುರಿದಿದೆ. ಅಣ್ಣಿಗೇರಿಯ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ, ಸಾರ್ವಜನಿಕರಿಗೆ ತೊಂದರೆ ಆಗಿದ್ದು, ಇಂದು ಪ್ರಭಾರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ನಾನಾ ಪ್ರದೇಶಗಳಿಗೆ ಭೇಟಿ ನೀಡಿ, ಮಳೆ ಹಾನಿ ಪರಿಶೀಲಿಸಿದರು.

ಅವರು ಜಲಾವೃತವಾಗಿರುವ ಅಣ್ಣಿಗೇರಿಯ ಸುರಕೋಡ ಬಡಾವಣೆಗೆ ಭೇಟಿ ನೀಡಿ, ಪರಿಶೀಲಿಸಿದರು. ಬಡಾವಣೆ ನಿವಾಸಿಗಳೊಂದಿಗೆ ಚರ್ಚಿಸಿದರು. ತಹಶಿಲ್ದಾರ ಹಾಗೂ ಪುರಸಭೆ ಅಧಿಕಾರಿಗಳಿಗೆ ಬಡಾವಣೆಯಲ್ಲಿ ನಿಂತಿರುವ ನೀರು ಸಂಪೂರ್ಣವಾಗಿ ಹರಿದು ಹೋಗುಬಂತೆ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಲು ಮತ್ತು ಜಲಾವೃತ್ತ ಪ್ರದೇಶದ ಮನೆಗಳಲ್ಲಿನ ಸಾರ್ವಜನಿಕರಿಗೆ ಅಗತ್ಯ ನೆರವು ನೀಡಲು ಸೂಚಿಸಿದರು.

ಬಡಾವಣೆ ಮೂಲ ನಕ್ಷೆಯನ್ನು ಪರಿಶೀಲಿಸಿ, ರಾಜಕಾಲುವೇ ಹಾಗೂ ಚರಂಡಿ ಒತ್ತುವರಿಯನ್ನು ತೆರವುಗೊಳಿಸಬೇಕು. ಬಡಾವಣೆಗೆ ಬರುವ ನೀರು ಸರಾಗಬಾಗಿ ಹರಿದು ಹೋಗುವಂತೆ ವ್ಯವಸ್ಥಿತ ಯೋಜನೆ ರೂಪಿಸಿ, ಕಾಮಗಾರಿಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಹಾಗೂ ಪ್ರಸ್ತಾವನೆ ರೂಪಿಸಲು ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಅಣ್ಣಿಗೇರಿ ಪಟ್ಟಣದಲ್ಲಿ ೮ ಮನೆಗಳು ಭಾಗಶಃ ಹಾನಿಯಾಗಿದ್ದು, ಸಿಡಿಲು ಬಡಿದು ೭ ಕುರಿಗಳು ಸಾವನಪ್ಪಿವೆ ಹಾಗೂ ಅಣ್ಣಿಗೇರಿ ತಾಲೂಕಿನ ಸೈದಾಪುರ ಮತ್ತು ಹೊಸಳ್ಳಿ ಸಂಪರ್ಕಿಸುವ ಹೊರೆಹಳ್ಳದ ಕಿರು ಸೇತುವೆ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಸೇತುವೆ ನಿರ್ಮಾಣಕ್ಕೆ ತಕ್ಷಣ ಕ್ರಿಯಾಯೋಜನೆ ರೂಪಿಸಿ, ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande