ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಜಾಬ್‌ಕಾರ್ಡ್ ಇ-ಕೆವೈಸಿ ಕಡ್ಡಾಯ
ಗದಗ, 09 ಅಕ್ಟೋಬರ್ (ಹಿ.ಸ.) : ಗದಗ : ಮಹಾತ್ಮ ಗಾಂಧಿ ಉದ್ಯೋಗ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿ ಗಳಿಗೆ ಎನ್‌ಎಂಎಂಎಸ್‌ ಆ್ಯಪ್‌ ಮೂಲಕ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದ್ದು ಸಮರೋಪಾದಿಯಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ
ಪೋಟೋ


ಗದಗ, 09 ಅಕ್ಟೋಬರ್ (ಹಿ.ಸ.) :

ಗದಗ : ಮಹಾತ್ಮ ಗಾಂಧಿ ಉದ್ಯೋಗ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿ ಗಳಿಗೆ ಎನ್‌ಎಂಎಂಎಸ್‌ ಆ್ಯಪ್‌ ಮೂಲಕ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದ್ದು ಸಮರೋಪಾದಿಯಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸುವಂತೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಗ್ರಾಪಂ ಸಿಬ್ಬಂದಿಗೆ ಸೂಚಿಸಿದರು.

ಗದಗ ತಾಲೂಕು ಪಂಚಾಯತಿಯಿಂದ ಗೂಗಲ್ ಮೀಟ್ ಮೂಲಕ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.

ಗದಗ ತಾಲೂಕು ವ್ಯಾಪ್ತಿಯ 27 ಗ್ರಾಮ ಪಂಚಾಯತಿಗಳ ಎಲ್ಲ ನೋಂದಾಯಿತ ಸಕ್ರಿಯ ಕೂಲಿಕಾರರು ಇ-ಕೆವೈಸಿ ಮೂಲಕ ಮಾಹಿತಿ ನವೀಕರಣ ಮಾಡಿಕೊಳ್ಳಲು ಅ. 31ರ ಒಳಗಾಗಿ ಮಾಡಿಸುವುದು ಕಡ್ಡಾಯವಾಗಿದೆ. ಎಂದು ಕಾರ್ಯನಿರ್ವಾಹಕ ತಾಲೂಕು ಅಧಿಕಾರಿ ಮಲ್ಲಯ್ಯ ಕೊರವನವರ ಹೇಳಿದರು.

ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 27 ಗ್ರಾಮ ಪಂಚಾಯತಿಗಳಿದ್ದು, ಒಟ್ಟು 52,022 ಸಕ್ರಿಯ ಉದ್ಯೋಗ ಚೀಟಿಗಳಿವೆ. ಸದ್ಯ ಸಕ್ರಿಯ ಉದ್ಯೋಗ ಚೀಟಿಗಳಿಗೆ ಇ- ಕೆವೈಸಿ ಮಾಡುವಂತೆ ಆಯುಕ್ತಾಲಯದಿಂದ ಆದೇಶ ಬಂದಿದೆ. ಅದರಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಜೊತೆಗೆ ಇ- ಕೆವೈಸಿ ಕಾರ್ಯಕ್ಕೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಸಕ್ರಿಯವಾಗಿರುವ ಜಾಬ್‌ಕಾರ್ಡ್‌ಗಳಿಗೆ ಇ-ಕೆವೈಸಿ ಮಾಡಿಸುವಂತೆ ಸೂಚಿಸಿದರು.

ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ (ಉಖಾ) ಕುಮಾರ ಪೂಜಾರ ಅವರು ಮಾತನಾಡಿ, ಗದಗ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಗ್ರಾಪಂಗಳು ಗದಗ ತಾಲೂಕು ಪಂಚಾಯತಿ ವ್ಯಾಪ್ತಿಯಲ್ಲಿ ಬರುತ್ತವೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಸಕ್ರಿಯ ಉದ್ಯೋಗ ಚೀಟಿಗಳು ಗದಗ ತಾಲೂಕಿನಲ್ಲಿವೇ. ಗ್ರಾಮ ಪಂಚಾಯತಿಯ ಗ್ರಾಮ ಕಾಯಕ ಮಿತ್ರರು, ಬಿಎಫ್‌ಟಿ, ಡಿಇಒ ಮತ್ತು ಕಾಯಕ ಬಂಧುಗಳನ್ನು ಸಕ್ರಿಯವಾಗಿ ಇ-ಕೆವೈಸಿ ಕಾರ್ಯದಲ್ಲಿ ತೊಡಗಿಸಿಕೊಂಡು ಪೂರ್ಣಗೊಳಿಸುವಂತೆ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande