ವಿಜಯಪುರ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ 4.8 ಕೆಜಿ ಗಟ್ಟಿ ಚಿನ್ನ ಹಾಗೂ 22 ಲಕ್ಷ ನಗದು ಪುನಃ ಜಪ್ತಿ ಮಾಡಲಾಗಿದೆ ಎಂದು ಎಡಿಜಿಪಿ ಆರ್ ಹಿತೇಂದ್ರ ಹೇಳಿದರು.
ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 15 ಜನ ಆರೋಪಿಗಳ ಬಂಧಿಸಿ, 39 ಕೆಜಿ ಗಟ್ಟಿ ಚಿನ್ನ, 1.16 ಕೋಟಿ ನಗದು, ಕೃತ್ಯಕ್ಕೆ ಬಳಸಿದ ವಾಹನಗಳ ಜೊತೆಗೆ 39.26 ಕೋಟಿಕ್ಕಿಂತ ಹೆಚ್ಚಿನ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಹೀಗೆ ಒಟ್ಟು 43.565 ಗಟ್ಟಿ ಚಿನ್ನ, 1.38 ಕೋಟಿ ನಗದು, 5 ಕಾರುಗಳು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳ ಸಮೇತ 44.48 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಮೇ 23ರ 2025ರಂದು ದರೋಡೆ ನಡೆದಿತ್ತು ಎಂದರು. ಅದಕ್ಕಾಗಿ ಇನ್ನು ತನಿಖೆ ಕೈಗೊಳ್ಳಲಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande