ಹೊಸಪೇಟೆ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ.ಬಿ.ಖಂಡ್ರೆ ಅವರು ನಾಳೆ ಹೊಸಪೇಟೆಗೆ ಆಗಮಿಸಲಿದ್ದಾರೆ.
ನಾಳೆ ಬೆಳಿಗ್ಗೆ.6.30 ಕ್ಕೆ ಬೆಂಗಳೂರಿನಿಂದ ರಸ್ತೆಯ ಮೂಲಕ ಪ್ರಯಾಣಿಸಿ ಬೆ.9.55 ಕ್ಕೆ ಬಳ್ಳಾರಿಗೆ ಆಗಮಿಸಿ ಬೆ.10 ಗಂಟೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬಳ್ಳಾರಿಯಲ್ಲಿ ಭಾಗವಹಿಸಿ, ಮಧ್ಯಾಹ್ನ 1 ಗಂಟೆಗೆ ಬಳ್ಳಾರಿ ರಸ್ತೆ ಮಾರ್ಗದಲ್ಲಿ ಹೊಸಪೇಟೆಗೆ ಮಧ್ಯಾಹ್ನ. 1.55 ಕ್ಕೆ ಆಗಮಿಸಿ ಮಧ್ಯಾಹ್ನ.2 ಗಂಟೆಗೆ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಮ್ಮಿಕೊಂಡಿರುವ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಬಳಿಕ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಂಜೆ.4 ಗಂಟೆಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಅರಣ್ಯ ಮತ್ತು ಪರಿಸರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪರಾಮರ್ಶನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ.5 ಗಂಟೆಗೆ ಹೊಸಪೇಟೆ ರಸ್ತೆ ಮಾರ್ಗದಿಂದ ದಾವಣಗೆರೆ, ಚಿತ್ರದುರ್ಗ ಮತ್ತು ಬೆಂಗಳೂರು ಗ್ರಾಮಾಂತರ ಮೂಲಕ ರಾತ್ರಿ.10 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಎ.ಆರ್.ರವಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್