ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ : ಇಂದು ತೀರ್ಪು
ಬೆಂಗಳೂರು, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬಸ್ಥರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಲೋಕಾಯುಕ್ತ ಪೋಲಿಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ
ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ : ಇಂದು ತೀರ್ಪು


ಬೆಂಗಳೂರು, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬಸ್ಥರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಲೋಕಾಯುಕ್ತ ಪೋಲಿಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸಲಿದೆ.

ಪ್ರಕರಣ ಸಂಬಂಧ ಬುಧವಾರ ನಡೆದ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತ್ತು.

ಮುಡಾದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿರುವ ಬಿ ರಿಪೋರ್ಟ್ ತಿರಸ್ಕರಿಸಬೇಕು. ಪ್ರಕರಣದ ತನಿಖಾಧಿಕಾರಿಯಾಗಿರುವ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್, ಸರಿಯಾದ ತನಿಖೆ ಮಾಡದೆ ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಹೀಗಾಗಿ ತನಿಖಾಧಿಕಾರಿಯನ್ನು ಬದಲಿಸಬೇಕು' ಎಂದು ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande