ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದಕ್ಕೆ ಪ್ರಧಾನಿ ಮೋದಿ ಸ್ವಾಗತ
ನವದೆಹಲಿ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯ ಮೊದಲ ಹಂತದ ಕುರಿತಾಗಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಐತಿಹಾಸಿಕ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪ್ರತಿಕ್ರಿಯ
Pm


ನವದೆಹಲಿ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗಾಜಾ ಶಾಂತಿ ಯೋಜನೆಯ ಮೊದಲ ಹಂತದ ಕುರಿತಾಗಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಐತಿಹಾಸಿಕ ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ಅವರು, “ಅಧ್ಯಕ್ಷ ಟ್ರಂಪ್ ಅವರ ಶಾಂತಿ ಯೋಜನೆಯ ಮೊದಲ ಹಂತದ ಕುರಿತ ಒಪ್ಪಂದವನ್ನು ಭಾರತ ಸ್ವಾಗತಿಸುತ್ತದೆ. ಇದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ದೃಢ ನಾಯಕತ್ವವನ್ನು ಸಹ ಪ್ರತಿಬಿಂಬಿಸುತ್ತದೆ. ಒತ್ತೆಯಾಳುಗಳ ಬಿಡುಗಡೆ ಹಾಗೂ ಗಾಜಾದ ಜನರಿಗೆ ಹೆಚ್ಚುವರಿ ಮಾನವೀಯ ನೆರವು ದೊರೆಯುವುದರಿಂದ ಈ ಪ್ರದೇಶದಲ್ಲಿ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುತ್ತದೆ ಎಂದು ನಂಬುತ್ತೇವೆ” ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande