ವಿಜಯಪುರ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಬಾಡಿಗೆ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಆರ್ ಹಿತೇಂದ್ರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.
ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ 24-08-2025ರಂದು ನಡೆದಿದ್ದ ಬಾಡಿಗೆ ಮನೆಯ ಕಳ್ಳತನ ಮಾಡಿದ್ದರು. ಸುನೀಲ ರಜಪೂತ, ಚೇತನ ಲಮಾಣಿ, ರಾಹುಲ್ ಲಮಾಣಿ ಬಂಧಿತ ಆರೋಪಿಗಳು. ಬಂಧಿತರು ಬೆಳಗಾವಿ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಅಲ್ಲದೇ, ಬಂಧಿತರಿಂದ 250 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ, ಎರಡು ಸ್ವಿಫ್ಟ್ ಕಾರು, ಎರಡು ಬೈಕ್, ನಾಲ್ಕು ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande