ಹೊಸಪೇಟೆ, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಂಪ್ಲಿಯಲ್ಲಿ ಅಕ್ಟೋಬರ್ 13 ರಿಂದ 15 ರವರೆಗೆ ಸಾವಯುವ ಕೃಷಿ, ನೈಸರ್ಗಕ ಕೃಷಿ, ತೋಟಗಾರಿಕೆ ಹಾಗೂ ಹೈನುಗಾರಿಕೆ ವಿಷಯಗಳ ಬಗ್ಗೆ ಮೂರು ದಿನದ ತರಬೇತಿಯನ್ನು ಉಚಿತವಾಗಿ ಏರ್ಪಡಿಸಲಾಗಿದೆ.
ಭಾಗವಹಿಸುವ ತರಬೇತಿದಾರರಿಗೆ ಉಚಿತವಾಗಿ ಊಟ ಮತ್ತು ವಸತಿ ಸೌಕರ್ಯ ಇರುತ್ತದೆ. ಆಸಕ್ತ ರೈತರು ಮತ್ತು ರೈತ ಮಹಿಳೆಯರು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಹೆಸರು ನೊಂದಾಯಿಸಲು ತಿಳಿಸಿದ್ದಾರೆ.
ಸಹಾಯಕ ಕೃಷಿ ನಿರ್ದೇಶಕಿ ವಿದ್ಯಾವತಿ ಹೊಸಮನಿ ಮೊ.7353533138 ಮತ್ತು ಕೃಷಿ ಅಧಿಕಾರಿ ಯೇಸುಬಾಬು ಮೊ.6360645255 ಸಂಖ್ಯೆಗಳಿಗೆ ಕರೆ ಮಾಡಿ ಸಂಪರ್ಕಿಸಬೇಕೆಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್