ಬೆಳಗಾವಿಯಲ್ಲಿ ಸಂಭ್ರಮದ ರಾಜ್ಯೋತ್ಸವ
ಬೆಳಗಾವಿ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು. ನಂತರ ನಡೆದ ಪಥಸಂ
Rajyostav


ಬೆಳಗಾವಿ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದರು.

ನಂತರ ನಡೆದ ಪಥಸಂಚಲನದಲ್ಲಿ ಭಾಗವಹಿಸಿ, ಕನ್ನಡದ ವೈಭವ, ಏಕತೆ ಮತ್ತು ಗೌರವವನ್ನು ಹೊಳೆಯುವ ರಾಜ್ಯೋತ್ಸವದ ಸಂದೇಶವನ್ನು ಜನತೆಗೆ ನೀಡಿದರು.

ಈ ವೇಳೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎಲ್ಲಾ ಪುರಸ್ಕೃತರನ್ನು ಸನ್ಮಾನಿಸಿ, ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಜಿ.ಪಂ. ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠರು ಭೀಮಾಶಂಕರ ಗುಳೇದ್, ಬೆಳಗಾವಿ ನಗರ ಎಸ್.ಪಿ ಬೊರಸೆ ಭೂಷಣ್ ಗುಲಾಬರಾಬ್ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande