ಮುಂಬೈ ವಿಮಾನ ನಿಲ್ದಾಣದಲ್ಲಿ ₹47 ಕೋಟಿ ಮೌಲ್ಯದ ಕೊಕೇನ್ ವಶ ; ಐವರ ಬಂಧನ
ಮುಂಬಯಿ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯ ವೇಳೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು 4.7 ಕಿಲೋಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು ₹47 ಕೋಟಿಯಷ್ಟಿದೆ
ಮುಂಬೈ ವಿಮಾನ ನಿಲ್ದಾಣದಲ್ಲಿ ₹47 ಕೋಟಿ ಮೌಲ್ಯದ ಕೊಕೇನ್ ವಶ ; ಐವರ ಬಂಧನ


ಮುಂಬಯಿ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯ ವೇಳೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು 4.7 ಕಿಲೋಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು ₹47 ಕೋಟಿಯಷ್ಟಿದೆ ಎಂದು ಅಂದಾಜಿಸಲಾಗಿದೆ.

ಡಿಆರ್‌ಐ ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿ ಐವರು ಶಂಕಿತರನ್ನು ಬಂಧಿಸಲಾಗಿದೆ. ಕೊಲಂಬೊದಿಂದ ಬಂದಿದ್ದ ಮಹಿಳಾ ಪ್ರಯಾಣಿಕಳೊಬ್ಬಳನ್ನು ತಂಡವು ಶಂಕೆ ಹಿನ್ನೆಲೆಯಲ್ಲಿ ತಡೆದು, ಆಕೆಯ ಸಾಮಾನುಗಳನ್ನು ಪರಿಶೀಲಿಸಿದಾಗ ಕಾಫಿ ಪುಡಿ ಪ್ಯಾಕೆಟ್‌ಗಳಲ್ಲಿ ಬಿಳಿ ವಸ್ತುವನ್ನು ಮರೆಮಾಡಿರುವುದು ಪತ್ತೆಯಾಯಿತು.

ಆರೋಪಿಯನ್ನು ತಕ್ಷಣ ಬಂಧಿಸಿ ವಿಚಾರಣೆ ನಡೆಸಿದ ಬಳಿಕ, ಶುಕ್ರವಾರ ರಾತ್ರಿ ನಾಲ್ವರು ಸಹಆರೋಪಿಗಳನ್ನು ಬಂಧಿಸಲಾಯಿತು.

ಈ ಪ್ರಕರಣದಡಿ ಬಂಧಿತ ಐವರು ಆರೋಪಿಗಳ ವಿರುದ್ಧ ಮಾದಕ ವಸ್ತು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ (ಎನ್‌ಡಿಪಿಎಸ್ ಕಾಯ್ದೆ), 1985ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಡಿಆರ್‌ಐ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande