
ಗದಗ, 1 ನವೆಂಬರ್ (ಹಿ.ಸ.):
ಆ್ಯಂಕರ್:
ಗದಗ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಾಯಿ ಭುವನೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಪೂಜೆ ಸಲ್ಲಿಸಿ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. ವಿವಿಧ ಇಲಾಖೆಯ ಆಕರ್ಷಕ ಸ್ತಬ್ದ ಚಿತ್ರಗಳನ್ನೊಳಗೊಂಡ ಮೆರವಣಿಗೆಯು ನಗರದ ಮುನ್ಸಿಪಲ್ ಕಾಲೇಜಿನಿಂದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಎಸ್.ಎನ್.ಬಳ್ಳಾರಿ, ಬಸವರಾಜ ಕಡೆಮನಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್,ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಡಿಡಿಪಿಐ ಆರ್.ಎಸ್.ಬುರುಡಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೆಶಕ ಕೊಟ್ರೇಶ ವಿಭೂತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ಡಾ.ಬಸವರಾಜ ಬಳ್ಳಾರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ ಮಡ್ಲೂರ, ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಹಿರಿಯರು, ಕನ್ನಡಾಭಿಮಾನಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP