
ನವದೆಹಲಿ, 01 ನವೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ.
ಮೋದಿಯವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿ, “ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರ ಶ್ರೇಷ್ಠತೆ, ಶ್ರಮಶೀಲತೆ ಮತ್ತು ಆತ್ಮಗೌರವವನ್ನು ನಾವು ಸ್ಮರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ನಾವು ಗೌರವಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ,” ಎಂದಿದ್ದಾರೆ.
ರಾಜ್ಯದ ಜನರು ಸದಾ ಸಂತೋಷ ಹಾಗೂ ಆರೋಗ್ಯದಿಂದ ಇರಲಿ ಎಂದು ಪ್ರಧಾನಿ ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa