ಸೈನಿಕ ಶಾಲೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ
ವಿಜಯಪುರ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಸೈನಿಕ ಶಾಲೆ ವಿಜಯಪುರದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ರಾಜಲಕ್ಷ್ಮಿ ಪೃಥ್ವಿರಾಜ್ ರವರು ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನವ
ಸೈನಿಕ


ವಿಜಯಪುರ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಸೈನಿಕ ಶಾಲೆ ವಿಜಯಪುರದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ ಗ್ರೂಪ್ ಕ್ಯಾಪ್ಟನ್ ರಾಜಲಕ್ಷ್ಮಿ ಪೃಥ್ವಿರಾಜ್ ರವರು ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದರು.

ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು.. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳಿ ಕರ್ನಾಟಕದ ಏಕೀಕರಣದ ರೂವಾರಿಗಳನ್ನು ನೆನೆದು, ಕನ್ನಡಾಂಬೆಯನ್ನು ಸ್ಮರಿಸುತ್ತಾ ಕನ್ನಡದಲ್ಲಿಯೇ ಸರ್ವರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಶಾಲೆಯ ಕೆಡೆಟ್‌ಗಳು ನಾಡಗೀತೆಯನ್ನು ಹಾಗೂ ಕನ್ನಡಾಂಬೆಯ ಸುಮಧುರ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ ಭುವನೇಶ್ವರಿ ಮಾತೆಯನ್ನ ಪ್ರಾರ್ಥಿಸಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಮಾಸ್ಟರ್ ಶ್ರೀ ರೇವಣಕುಮಾರ ದೇಸಾಯಿ, ಶಾಲೆಯ ಶೈಕ್ಷಣಿಕ ಮತ್ತು ಆಡಳಿತ ಸಿಬ್ಬಂದಿವರ್ಗದವರು, ಎನ್‌.ಸಿ.ಸಿ. ಸಿಬ್ಬಂದಿವರ್ಗ ಮತ್ತು ಕೆಡೆಟ್‌ಗಳು ಉಪಸ್ಥಿತರಿದ್ದರು.

ಶಾಲೆಯ ಕನ್ನಡ ಶಿಕ್ಷಕರಾದ ಶ್ರೀಯುತ ರಮೇಶ್ ಗೌಡ ಬಿರಾದಾರ್ ರವರು ಕನ್ನಡ ರಾಜ್ಯೋತ್ಸವದ ಪ್ರಾಸ್ತಾವಿಕ ನುಡಿಗಳನ್ನು ಹೇಳಿ, ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande