ಬಸವೇಶ್ವರ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಗದಗ, 1 ನವೆಂಬರ್ (ಹಿ.ಸ.): ಆ್ಯಂಕರ್: ಗದಗ ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಹಾಗೂ ಶ್ರೀ ಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾ ಎಂ
ಫೋಟೋ


ಗದಗ, 1 ನವೆಂಬರ್ (ಹಿ.ಸ.):

ಆ್ಯಂಕರ್:

ಗದಗ ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ ಹಾಗೂ ಶ್ರೀ ಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾ ಎಂ. ಎಂ. ಬುರಡಿಯವರು ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಕನ್ನಡ ಭಾಷೆ 2000 ವರ್ಷಗಳ ಇತಿಹಾಸ ಹೊಂದಿದೆ. ಸಾರ್ವಜನಿಕ ಮತ್ತು ಸಾಮುದಾಯಿಕ ಜೀವನದಲ್ಲಿ ಕನ್ನಡವು ಪ್ರಥಮ ಭಾಷೆಯಾಗಬೇಕೆಂದು ಹೇಳುತ್ತಾ ಕನ್ನಡ ಭಾಷೆ, ನೆಲ,ಜಲಗಳಿಗೆ ಧಕ್ಕೆ ಉಂಟಾದಾಗ ಧ್ವನಿ ಎತ್ತಿದ ಪೂಜ್ಯ ಲಿಂ ಶ್ರೀ ಸಿದ್ಧಲಿಂಗ ಶ್ರೀಗಳ ಕನ್ನಡಾಭಿಮಾನವನ್ನು ಸ್ಮರಿಸಿಕೊಂಡರು.

ಸಮಾರಂಭದಲ್ಲಿ ಪಾಲ್ಗೊಂಡ ಶ್ರೀ ಸಿದ್ಧೇಶ್ವರ ಪಿ.ಯು. ಕಾಲೇಜಿನ ಪ್ರಾ ವಾಯ್ ಎಸ್ ಮತ್ತೂರ ಅವರು ಮಾತನಾಡಿ ಕರ್ನಾಟಕ ಏಕೀಕರಣದ ಇತಿಹಾಸವನ್ನು ಪರಿಚಯಿಸಿದರು. ಪ್ರೊ ಎಸ. ಎಸ್. ಭಜಂತ್ರಿಯವರು ಪ್ರಾಸ್ತಾವಿಕ ಮಾತುಗಳನ್ನು ಹೇಳಿ ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ಎರಡು ಮಹಾವಿದ್ಯಾಲಯಗಳ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande