ನ.03 ರಂದು ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ
ಬಳ್ಳಾರಿ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ವಿಭಾಗ ಹಾಗೂ ಮಿಲ್ಲರ್‍ಪೇಟೆ ನಗರ ಆರೋಗ್
ನ.03 ರಂದು ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ


ಬಳ್ಳಾರಿ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ವಿಭಾಗ ಹಾಗೂ ಮಿಲ್ಲರ್‍ಪೇಟೆ ನಗರ ಆರೋಗ್ಯ ಕೇಂದ್ರ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನ.03 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಿಲ್ಲರ್ ಪೇಟೆಯ ವಾರ್ಡ್ ನಂ.13 ರಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ (ನ.03 ರಿಂದ ನ.19 ರವರೆಗೆ 14 ದಿನಗಳ ಕಾಲ) ಕುಷ್ಠರೋಗ ಪತ್ತೆ ಹಚ್ಚುವ ಅಂದೋಲನಾ ಸಮೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಹಾನಗರ ಪಾಲಿಕೆಯ ಸದಸ್ಯ ಇಬ್ರಾಹಿಂಬಾಬು ಅವರು ಕಾರ್ಯಕ್ರಮ ಉದ್ಘಾಟಿಸುವರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುμÁ್ಟನ ಅಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಮಿಲ್ಲರ್ ಪೇಟೆಯ ವೈದ್ಯಾಧಿಕಾರಿಗಳಾದ ಡಾ.ನವೀನ್ ಕುಮಾರ್, ಡಾ.ಶೋಭ, ಡಾ.ಹರೀಶ್ ಸೇರಿದಂತೆ ಇತರರು ಮುಖ್ಯ ಅಥಿಗಳಾಗಿ ಭಾಗವಹಿಸುವರು.

ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಸ್ವಾಗತ ಮತ್ತು ನಿರೂಪಣೆ ಮಾಡುವರು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande