
ಬೆಂಗಳೂರು, 1 ನವೆಂಬರ್ (ಹಿ.ಸ.):
ಆ್ಯಂಕರ್:ಎಂಇಎಸ್ ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.
ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಕನ್ನಡ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa