
ಗದಗ, 1 ನವೆಂಬರ್ (ಹಿ.ಸ.):
ಆ್ಯಂಕರ್:
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಪ್ರವಾಸೋದ್ಯಮ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರುಗಳ ಸಹಯೋಗದಲ್ಲಿ ಕರ್ನಾಟಕ ಸಂಭ್ರಮ 52 ರ ನಿಮಿತ್ತ ಸಂಗೀತ ಕಾರ್ಯಕ್ರಮವನ್ನು ನವೆಂಬರ್ 3 ರಂದು ಸಂಜೆ 5 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಎದುರಿಗೆ ಭಾರತ ರತ್ನ ಪಂಡಿತ ಭೀಮಸೇನ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಶಾಸಕರು ಹಾಗೂ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕ ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ.ಎಂ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಆಗಮಿಸುವರು.
ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾದಿಕಾರದ ಆಯುಕ್ತ ಡಾ.ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರಿಗೂ ಆದರದ ಸ್ವಾಗತ ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP