
ವಿಜಯಪುರ, 01 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ೭೦ನೇ ಕನ್ನಡ ರಾಜ್ಯೋತ್ಸವದ ಸಂಭ್ರಮದ ವೇಳೆಯಲ್ಲಿ ಧ್ವಜಾರೋಹಣದ ವೇಳೆ ಎಡವಟ್ಟು ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ತಾಲೂಕಾ ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜವನ್ನು ಬುಡಮೇಲು ಹಾರಿಸಲಾಗಿದೆ.
ತಹಶೀಲ್ದಾರ್ ಕರಿಯಪ್ಪ ಹಾಗೂ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿಯಿ ಧ್ವಜಾರೋಹಣ ಮಾಡಿದ್ದಾರೆ.
ರಾಷ್ಟ್ರಧ್ವಜ ಬುಡಮೇಲು ಹಾರಿಸಿ ಎಡವಟ್ಟು ಮಾಡಿದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande