ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟಕ್ಕೆ ಬೆಂಬಲ ಇಲ್ಲ:ಸಚಿವೆ ಹೆಬ್ಬಾಳಕರ್
ಉಡುಪಿ, 1 ನವೆಂಬರ್ (ಹಿ.ಸ.): ಆ್ಯಂಕರ್: ಕರ್ನಾಟಕ ರಾಜ್ಯೋತ್ಸವ ದಿನ ಬಹಳ ಪವಿತ್ರವಾದದ್ದು ಇಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಧ್ವಜ ಹಾರಿಸಿದವರಿಗೆ ನಾನು ಬೆಂಬಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕ
Hebalkar


ಉಡುಪಿ, 1 ನವೆಂಬರ್ (ಹಿ.ಸ.):

ಆ್ಯಂಕರ್:

ಕರ್ನಾಟಕ ರಾಜ್ಯೋತ್ಸವ ದಿನ ಬಹಳ ಪವಿತ್ರವಾದದ್ದು ಇಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಧ್ವಜ ಹಾರಿಸಿದವರಿಗೆ ನಾನು ಬೆಂಬಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಏಕೀಕರಣಕ್ಕೆ ಹಿರಿಯರು, ಸಾಹಿತಿಗಳು ಹೋರಾಟ ಮಾಡಿದ್ದಾರೆ. ಈ ಸುಸಂದರ್ಭದಲ್ಲಿ ಈ ಬೆಳವಣಿಗೆಗಳ ಬಗ್ಗೆ ನಾನು ಮಾತಾಡಲ್ಲ. ಈ ಬೆಳವಣಿಗೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande