ಕರ್ತವ್ಯದೊಂದಿಗೆ ಸಾರ್ವಜನಿಕರ ಬಗ್ಗೆ ಮಾನವೀಯತೆ ಅಳವಡಿಸಿಕೊಳ್ಳಿ : ಉಪಲೋಕಾಯುಕ್ತ
ಕೊಪ್ಪಳ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಯೊಂದಿಗೆ ನ್ಯಾಯಯುತ ನಡವಳಿಕೆ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕರ ಬಗ್ಗೆ ಮಾನವೀಯತೆ ಅಳವಡಿಸಿಕೊಳ್ಳಬೇಕು. ಸರ್ಕಾರಿ ಸೇವೆಯನ್ನು ನಿಸ್ವಾರ್ಥ ಹಾಗೂ ನಿಷ್ಪಕ್ಷಪಾತವಾಗಿ ಒದಗಿಸಬೇಕು ಎಂದು ಕರ್ನಾಟಕ ಉಪಲೋಕಾಯುಕ್ತರಾದ ನ್
ಅಧಿಕಾರಿಗಳು ತಮ್ಮ ಕರ್ತವ್ಯದೊಂದಿಗೆ ಸಾರ್ವಜನಿಕರ ಬಗ್ಗೆ ಮಾನವೀಯತೆ ಅಳವಡಿಸಿಕೊಳ್ಳಿ: ಉಪಲೋಕಾಯುಕ್ತ


ಅಧಿಕಾರಿಗಳು ತಮ್ಮ ಕರ್ತವ್ಯದೊಂದಿಗೆ ಸಾರ್ವಜನಿಕರ ಬಗ್ಗೆ ಮಾನವೀಯತೆ ಅಳವಡಿಸಿಕೊಳ್ಳಿ: ಉಪಲೋಕಾಯುಕ್ತ


ಕೊಪ್ಪಳ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಯೊಂದಿಗೆ ನ್ಯಾಯಯುತ ನಡವಳಿಕೆ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕರ ಬಗ್ಗೆ ಮಾನವೀಯತೆ ಅಳವಡಿಸಿಕೊಳ್ಳಬೇಕು. ಸರ್ಕಾರಿ ಸೇವೆಯನ್ನು ನಿಸ್ವಾರ್ಥ ಹಾಗೂ ನಿಷ್ಪಕ್ಷಪಾತವಾಗಿ ಒದಗಿಸಬೇಕು ಎಂದು ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಬಿ.ವೀರಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲೋಕಾಯುಕ್ತ ವ್ಯಾಪ್ತಿಯ ಬಾಕಿ ಪ್ರಕರಣಗಳ ವಿಚಾರಣೆಯ ನಂತರ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 3 ದಿನಗಳ ಕಾಲ ಕರ್ನಾಟಕ ಲೋಕಾಯುಕ್ತದಿಂದ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ಜಿಲ್ಲೆಯ 43 ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಸೂಕ್ತ ದಾಖಲಾತಿಗಳು ಇಲ್ಲದ, ಚಾಲನೆಗೆ ಯೋಗ್ಯವಲ್ಲದ 98 ಶಾಲಾ ಬಸ್‍ಗಳನ್ನು ಜಪ್ತಿ ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ರೂ.1,63,000/- ಗಳ ದಂಡವನ್ನು ವಸೂಲಿ ಮಾಡಲಾಗಿದೆ. ಇದೆಲ್ಲವೂ ನಾನು ಬಂದು ಮಾಡುವಂತದ್ದಲ್ಲ. ಅಧಿಕಾರಿಗಳು ಸ್ವಯಂಪ್ರೇರಣೆಯಿಂದ ತಮ್ಮ ತಮ್ಮ ಕರ್ತವ್ಯ ನಿರ್ವಹಿಸಿದರೆ ಎಲ್ಲವೂ ಸುವ್ಯವಸ್ಥಿತವಾಗಿರುತ್ತದೆ. ಸರ್ಕಾರಿ ವ್ಯವಸ್ಥೆ, ಆಡಳಿತವೂ ಅಚ್ಚುಕಟ್ಟಾಗಿರುತ್ತದೆ. ಆದ್ದರಿಂದ ಅಧಿಕಾರಿಗಳು ತಮ್ಮ ಕರ್ತವ್ಯದೊಂದಿಗೆ ಮಾನವೀಯತೆ ಅಳವಡಿಸಿಕೊಂಡು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಹೇಳಿದರು.

3 ದಿನಗಳ ಅವಧಿಯಲ್ಲಿ ಒಟ್ಟು 384 ಪ್ರಕರಣಗಳ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿ ಅದರಲ್ಲಿ 62 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಲೋಕಾಯುಕ್ತ ವ್ಯಾಪ್ತಿಯಲ್ಲಿ ಬಾಕಿ ಇದ್ದ 120 ಪ್ರಕರಣಗಳಲ್ಲಿ 46 ಪ್ರಕರಣಗಳನ್ನು ಇತ್ಯರ್ಥಪಡಿಸಿಲಾಗಿದೆ. ಒಟ್ಟು 108 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ವಿದ್ಯಾರ್ಥಿಗಳ ವಸತಿ ನಿಲಯಗಳ ಭೇಟಿ ನಂತರ ವಿದ್ಯಾರ್ಥಿಗಳಿಗೆ ಬಿಸಿ ನೀರು ಸೌಲಭ್ಯ ಒದಗಿಸಲಾಗಿದೆ. ಕಿಮ್ಸ್, ಎಂಸಿಎಚ್, ಜಿಲ್ಲಾ ತರಬೇತಿ ಕೇಂದ್ರ, ತಾಲ್ಲೂಕು ಕಚೇರಿ, ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಕೊಪ್ಪಳ ತಾಲ್ಲೂಕು, ಎಪಿಎಂಸಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗಣಿ ವಿಜ್ಞಾನ ಇಲಾಖೆ, ತೋಟಗಾರಿಕೆ ಇಲಾಖೆ, ತಾಲ್ಲೂಕು ಪಂಚಾಯತಿ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಅಬಕಾರಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರವಾಸೋದ್ಯಮ, ಪ್ರಾದೇಶಿಕ ಸಾರಿಗೆ ಇಲಾಖೆ, ಕ್ವಾರಿಗಳು ಸೇರಿದಂತೆ ಒಟ್ಟು ವಿವಿಧ ಇಲಾಖೆಗಳ ಮೇಲೆ 24 ಸ್ವಯಂಪ್ರೇರಿತ ದೂರುಗಳನ್ನು ದಾಖಲು ಮಾಡಲಾಗಿದೆ. ಇವುಗಳ ವಿಚಾರಣೆ ಮುಂದುವರೆಯುತ್ತದೆ ಎಂದು ಅವರು ಹೇಳಿದರು.

ಸಾರ್ವಜನಿಕ ಅಹವಾಲು ಹಾಗೂ ಕುಂದುಕೊರತೆ ದೂರು ಅರ್ಜಿ ಸಲ್ಲಿಸಲು ಜನರಿಗಾಗಿ ಪ್ರತ್ಯೇಕ ಕೌಂಟರಗಳನ್ನು ಸ್ಥಾಪಿಸಲಾಗಿತ್ತು. ಅರ್ಜಿಸಲ್ಲಿಸಲು ಬಂದ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕರ್ನಾಟಕ ಲೋಕಾಯುಕ್ತದ ವಿಚಾರಣೆ ಅಪರ ನಿಬಂಧಕರಾದ ಡಾ. ಕಸನಪ್ಪ ನಾಯ್ಕ, ರಮಾಕಾಂತ್ ಚವ್ಹಾಣ ಹಾಗೂ ಅರವಿಂದ ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮಹಾಂತೇಶ್ ಎಸ್. ದರಗದ, ರಾಯಚೂರು ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರಾದ ಸತೀಶ್ ಎಸ್. ಚಿಟಗುಬ್ಬಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಅಹವಾಲು ಹಾಗೂ ದೂರುಗಳನ್ನು ಸಲ್ಲಿಸಲು ಬಂದ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande