
ರಾಯಪುರ್, 01 ನವೆಂಬರ್ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ಸಂಸ್ಥಾಪನಾ ದಿನದ ಬೆಳ್ಳಿ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ನವ ರಾಯ್‌ಪುರದ ಶ್ರೀ ಸತ್ಯ ಸಾಯಿ ಸಂಜೀವಿನಿ ಮಕ್ಕಳ ಹೃದಯ ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೊಂಡಿದ್ದ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿ ಅವರ ಆರೋಗ್ಯ ವಿಚಾರಿಸಿದರು.
ಹೃದಯಸ್ಪರ್ಶಿ ಕ್ಷಣಗಳಲ್ಲಿ, ಕೊರ್ಬಾ ಜಿಲ್ಲೆಯ ಹುಡುಗಿಯೊಬ್ಬಳು “ನಾನು ದೊಡ್ಡವಳಾದಾಗ ವೈದ್ಯೆಯಾಗಬೇಕೆಂದು ಬಯಸುತ್ತೇನೆ” ಎಂದು ಹೇಳಿದಾಗ ಪ್ರಧಾನಿ ಮೋದಿಯವರು ಸಂತಸ ವ್ಯಕ್ತಪಡಿಸಿದರು.
ಸಮಾಜಸೇವೆಯ ಅಸಾಧಾರಣ ಮಾದರಿಯಾದ ಈ ಆಸ್ಪತ್ರೆಯಲ್ಲಿ ಕಳೆದ 13 ವರ್ಷಗಳಲ್ಲಿ 20,000 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆಗಳು ಉಚಿತವಾಗಿ ನಡೆದಿದ್ದು, 1.5 ಲಕ್ಷಕ್ಕೂ ಅಧಿಕ ಹೊರರೋಗಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಪ್ರಧಾನಿ ಮೋದಿ ಆಸ್ಪತ್ರೆಯ ಕಾರ್ಯದಿಂದ ಪ್ರಭಾವಿತರಾಗಿ, ಉತ್ತರ ಪ್ರದೇಶದ ವಾರಾಣಸಿಯಲ್ಲಿ ಇದೇ ಮಾದರಿಯ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಅವರು ಸತ್ಯ ಸಾಯಿ ಅವರ ಜಲ ಸಂರಕ್ಷಣಾ ಕಾರ್ಯಗಳನ್ನು ಸ್ಮರಿಸಿ, ದೇಶದ ಜನತೆಗೆ ನೀರಿನ ಸಂರಕ್ಷಣೆ ಕುರಿತ ಸಂದೇಶ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa