



ಬಳ್ಳಾರಿ, 01 ನವೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಭಾಷೆ ಉಳಿಸಿ ಬೆಳೆಸಿ ಕಾರ್ಯ ಇಂದಿನ ಯುವ ಸಮೂಹದಿಂದ ಆಗಬೇಕಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಹೇಳಿದ್ದಾರೆ.
ಶನಿವಾರ ಜಿಲ್ಲಾಡಳಿತ ವತಿಯಿಂದ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ರಾಜ್ಯೋತ್ಸವದ ಸಂದೇಶ ನೀಡಿ ಅವರು ಮಾತನಾಡಿದರು.
ಕೇವಲ ಇಂಗ್ಲೀಷ್ ಓದಿದರೆ ಕೆಲಸ ಸಿಗುವುದಿಲ್ಲ. ಚೀನಾ, ಜಪಾನ್ ನಂತಹ ದೇಶಗಳು ಅಭಿವೃದ್ಧಿ ಹೊಂದಿರುವುದು ತಮ್ಮ-ತಮ್ಮ ಮಾತೃ ಭಾಷೆಯಲ್ಲಿಯೇ. ಹಾಗಾಗಿ ನಮ್ಮ ಕನ್ನಡ ಭಾಷೆ, ನಮ್ಮತನ ಬೆಳೆಸೋಣ ಎಂದರು.
ಯುವಪೀಳಿಗೆಯಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸಿ ಕನ್ನಡ ಭಾಷೆಯ ಬಳಕೆ ಮತ್ತು ಮಹತ್ವದ ಬಗ್ಗೆ ತಿಳಿಸೋಣ, ಮಕ್ಕಳಿಗೆ ಕನ್ನಡ ಭಾಷೆಯಲ್ಲಿಯೇ ಶಿಕ್ಷಣ ಕೊಡಿಸೋಣ ಎಂದು ಹೇಳಿದರು.
ಹಲವು ಕನ್ನಡ ಪರ ಸಂಘಟನೆಗಳಿಂದ ಕನ್ನಡ ತಾಯಿ ಭುವನೇಶ್ವರಿ ದೇವಿ ಅವರ ಭಾವಚಿತ್ರ ಹಾಗೂ ಕರ್ನಾಟಕ ಏಕೀಕರಣದ ರೂವಾರಿ ಬಳ್ಳಾರಿಯ ಹೋರಾಟಗಾರ ಪಿಂಜಾರ ರಂಜಾನ್ ಸಾಬ್ ಅವರ ಭಾವಚಿತ್ರ ವಾಹನ ಕಾರ್ಯಕ್ರಮದ ವಿಶೇಷವಾಗಿತ್ತು.
ಸಾಧಕರ ಸನ್ಮಾನ:
ಕನ್ನಡ ನಾಡು-ನುಡಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾ ಸನ್ಮಾನಿಸಿ ಗೌರವಿಸಲಾಯಿತು.
ಬುರ್ರಕಥಾ- ಜಂಬಕ್ಕ ಎಂಡಿ ಕ್ಯಾಂಪ್(ಕಂಪ್ಲಿ), ಬಯಲಾಟ- ಚೆನ್ನದಾಸರ ಮಾರೆಪ್ಪ(ಮೆಟ್ರಿ), ಹಗಲುವೇಷ- ಕೆ.ಶಂಕ್ರಪ್ಪ(ಶ್ರೀಧರಗಡ್ಡೆ), ಕನ್ನಡ ಸೇವೆ- ಹೀಮಂತ್ ರಾಜ್ ಸಂಗನಕಲ್ಲು, ಶಿಕ್ಷಣ ಕ್ಷೇತ್ರ- ಸಿ.ಎಂ.ಶಿಗ್ಗಾವಿ ಸಂಡೂರು ಮತ್ತು ಪುರುಷೋತ್ತಮ ಬಿ.ಬಳ್ಳಾರಿ, ವೈದ್ಯಕೀಯ ಕ್ಷೇತ್ರ- ಡಾ.ಮಧುಸೂಧನ್ ಕಾರಿಗನೂರು (ಸಿರುಗುಪ್ಪ), ಸಾಹಿತ್ಯ ಕ್ಷೇತ್ರ- ಬಂಗಿ ದೊಡ್ಡ ಮಂಜುನಾಥ (ಕಂಪ್ಲಿ), ಚಿತ್ರಕಲೆ ಕ್ಷೇತ್ರ- ಮಹ್ಮದ್ ರಫಿ ಬಳ್ಳಾರಿ, ಸಾಹಿತ್ಯ/ಸಂಘಟನೆ ಕ್ಷೇತ್ರ- ದಮ್ಮೂರು ಮಲ್ಲಿಕಾರ್ಜುನ(ಸಿರುಗುಪ್ಪ) ಪತ್ರಿಕೋದ್ಯಮ- ಕೆ.ಎನ್.ಗಂಗಾಧರ ಗೌಡ.
70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶಾಲೆ ಮತ್ತು ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೆÇಲೀಸ್ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳು ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಕನ್ನಡಪರ ಸಂಘಟನೆಗಳು, ಹೋರಾಟಗಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್