ಕನ್ನಡವನ್ನು ಹೊಸ ತಂತ್ರಜ್ಞಾನ ಭಾಷೆಯನ್ನಾಗಿಸಲು ಮುಂದಾಗಿ : ಸಿದ್ದರಾಮಯ್ಯ ಕರೆ
ಬೆಂಗಳೂರು, 01 ನವೆಂಬರ್ (ಹಿ.ಸ.) : ಆ್ಯಂಕರ್ : ಕೃತಕ ಬುದ್ಧಿಮತ್ತೆಯಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು
Cm


ಬೆಂಗಳೂರು, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಕೃತಕ ಬುದ್ಧಿಮತ್ತೆಯಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದ ಅವರು,

ಮಾಹಿತಿ ತಂತ್ರಜ್ಞಾನ‌ ಯುಗ ಈಗ ಕೃತಕ ತಂತ್ರಜ್ಞಾನದ ಯುಗವಾಗಿ ಮಾರ್ಪಾಡಾಗುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕವೂ ಎದುರಾಗಿದೆ. ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನೂ ನಮ್ಮ ಸರ್ಕಾರ ಮಾಡುತ್ತಿದೆ. ಇದರ ಭಾಗವಾಗಿ ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಕರೆ ನೀಡಿದರು.

ಇದರ ಜೊತೆಗೆ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.

ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದರು.

ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande