ಕನ್ನಡ ರಾಜ್ಯೋತ್ಸವದ ವಿಶೇಷ ಸನ್ಮಾನ
ರಾಯಚೂರು , 1 ನವೆಂಬರ್ (ಹಿ.ಸ.) ಆ್ಯಂಕರ್ : ವಿವಿಧ ಕ್ಷೇತ್ರದಲ್ಲಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ರಾಯಚೂರು ಜಿಲ್ಲೆಯ ಗಣ್ಯ ಮಹನಿಯರಿಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನವೆಂಬರ್ 1ರಂದು ನಡೆದ ಸಮಾರಂಭದಲ್ಲಿ ಕನ್ನಡ ರಾಜ್ಯೋತ್ಸವದ ವಿಶೇಷ ಸನ್ಮಾನ ನಡೆಯಿತು.
ಕನ್ನಡ ರಾಜ್ಯೋತ್ಸವದ ವಿಶೇಷ ಸನ್ಮಾನ


ರಾಯಚೂರು , 1 ನವೆಂಬರ್ (ಹಿ.ಸ.)

ಆ್ಯಂಕರ್ :

ವಿವಿಧ ಕ್ಷೇತ್ರದಲ್ಲಿ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ರಾಯಚೂರು ಜಿಲ್ಲೆಯ ಗಣ್ಯ ಮಹನಿಯರಿಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನವೆಂಬರ್ 1ರಂದು ನಡೆದ ಸಮಾರಂಭದಲ್ಲಿ ಕನ್ನಡ ರಾಜ್ಯೋತ್ಸವದ ವಿಶೇಷ ಸನ್ಮಾನ ನಡೆಯಿತು.

ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಬಾಬು ಭಂಡಾರಿಗಲ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ, ವೈದ್ಯಕೀಯ ಕ್ಷೇತ್ರದಲ್ಲಿ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಿ ಸಾಗರ, ಸಮಾಜ ಸೇವೆ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ್ ಮಿರ್ಜಾಪೂರ, ಕಲಾ ಕ್ಷೇತ್ರದಲ್ಲಿ ಸಿಂಧನೂರು ತಾಲೂಕಿನ ಸುಕಾಲಪೇಟೆ ನಾರಾಯಣಪ್ಪ ಮಾಡಶಿರವಾರ, ಕೃಷಿ ಕ್ಷೇತ್ರದಲ್ಲಿ ರಾಯಚೂರು ತಾಲೂಕಿನ ಪಲ್ಕಂದೊಡ್ಡಿ ಗ್ರಾಮದ ಹನುಮರೆಡ್ಡಿ ತಂದೆ ಬಸವರಾಜಪ್ಪ ಹಾಗೂ ಸೇವಾ ಕ್ಷೇತ್ರದಲ್ಲಿ ಸುರಕ್ಷಾ ಟ್ರಸ್ಟ್ ರಾಯಚೂರು ಹಾಗೂ ಕಲಾ ಸಂಕುಲ ಸಂಸ್ಥೆ ರಾಯಚೂರು ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್‍ಸಿಂಗ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ ಹಾಗೂ ಇನ್ನಿತರ ಗಣ್ಯರು, ಸನ್ಮಾನಿಸಿ ಗೌರವಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande