ಸಮೃದ್ಧ ಕರ್ನಾಟಕ ಕಟ್ಟಲು ರಾಜ್ಯ ಸರ್ಕಾರ ಬದ್ಧ : ಡಾ.ಶರಣಪ್ರಕಾಶ ಪಾಟೀಲ
ರಾಯಚೂರು, 01 ನವೆಂಬರ್ (ಹಿ.ಸ.) : ಆ್ಯಂಕರ್ : ಸಾಮರಸ್ಯವೇ ನಮ್ಮ ಕನ್ನಡ ನಾಡಿನ ಸಂಸ್ಕøತಿಯ ಜೀವಾಳವಾಗಿದೆ. ಅದರಂತೆ ಸಮೃದ್ಧ ಕರ್ನಾಟಕವನ್ನು ಕಟ್ಟುವುದರಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತ
ಸಮೃದ್ಧ ಕರ್ನಾಟಕ ಕಟ್ಟಲು ರಾಜ್ಯ ಸರ್ಕಾರ ಬದ್ಧ: ಡಾ.ಶರಣಪ್ರಕಾಶ ಪಾಟೀಲ


ಸಮೃದ್ಧ ಕರ್ನಾಟಕ ಕಟ್ಟಲು ರಾಜ್ಯ ಸರ್ಕಾರ ಬದ್ಧ: ಡಾ.ಶರಣಪ್ರಕಾಶ ಪಾಟೀಲ


ಸಮೃದ್ಧ ಕರ್ನಾಟಕ ಕಟ್ಟಲು ರಾಜ್ಯ ಸರ್ಕಾರ ಬದ್ಧ: ಡಾ.ಶರಣಪ್ರಕಾಶ ಪಾಟೀಲ


ರಾಯಚೂರು, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಸಾಮರಸ್ಯವೇ ನಮ್ಮ ಕನ್ನಡ ನಾಡಿನ ಸಂಸ್ಕøತಿಯ ಜೀವಾಳವಾಗಿದೆ. ಅದರಂತೆ ಸಮೃದ್ಧ ಕರ್ನಾಟಕವನ್ನು ಕಟ್ಟುವುದರಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಹೇಳಿದ್ದಾರೆ.

ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆದ ಕನ್ನಡ ರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ನಮ್ಮ ನಾಡು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಅದರಂತೆ ನಾಡಿನ ಉಜ್ವಲ ಮತ್ತು ಭವ್ಯ ಸಾಂಸ್ಕೃತಿಕ ಪರಂಪರೆ, ಕನ್ನಡ ನಾಡುನುಡಿಯ ಸಂರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕರ್ನಾಟಕವು ಸರ್ವಧರ್ಮ ರಕ್ಷಣೆ, ಸತ್ಯಾರಾಧನೆ, ಧರ್ಮನೀತಿ, ಸರ್ವಧರ್ಮ ಸಹಿಷ್ಣುತೆ, ಧಾರ್ಮಿಕ ಸಮನ್ವಯ, ಸಹಬಾಳ್ವೆ, ಸೌಹಾರ್ದತೆ ಮತ್ತು ಭಾವೈಕ್ಯತೆಯ ದಿವ್ಯ ಸ್ವರ್ಗವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಸಂದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ನಮ್ಮ ರಾಜ್ಯವು ಬ್ರಿಟೀಷರ ಅಧಿಕಾರಾವಧಿಯಲ್ಲಿ ಹರಿದು ಹಂಚಿಹೋಗಿತ್ತು. ಬಳಿಕ ಕರ್ನಾಟಕ ಏಕೀಕರಣಕ್ಕಾಗಿ ಹೋರಾಟಗಳು ನಡೆದವು. ಕನ್ನಡ ಏಕೀಕರಣಕ್ಕಾಗಿ ಅನೇಕ ಮಹನಿಯರು ಶ್ರಮಿಸಿದರು. ಬಳಿಕ 1956ರ ನವಂಬರ್ 1 ರಂದು ಕನ್ನಡ ಭಾμÉಯನ್ನಾಡುವ ವಿಶಾಲ ಮೈಸೂರು ರಾಜ್ಯ ಉದಯವಾಯಿತು. 1973ರ ನವಂಬರ್ 1 ರಂದು ಅಂದಿನ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿದರು ಎಂದರು.

ನಮ್ಮ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರತಿ ವರ್ಷ ಸಾವಿರಾರು ಕೋಟಿ ರೂ.ಗಳನ್ನು ಮೀಸಲಿರಿಸಿ ರಾಯಚೂರು ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ. ರಾಯಚೂರು ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಸಾಗಿವೆ. ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮತ್ತು ಹೆದ್ದಾರಿ ನಿರ್ಮಾಣ ಕಾರ್ಯಗಳು ಚುರುಕಾಗಿ ನಡೆದಿದೆ ಎಂದರು.

ರಾಯಚೂರಲ್ಲಿ ಎಮ್ಸ್ ಸ್ಥಾಪನೆಯಾಗಬೇಕು ಎಂಬುದು ನಮ್ಮ ಭಾಗದ ಜನರ ಬಹ್ಮದೊಡ್ಡ ನಿರೀಕ್ಷೆಯಾಗಿದೆ. ಇದು ಕೇಂದ್ರ ಸರ್ಕಾರದ ನಿರ್ಣಯವಾಗಿದೆ. ಎಮ್ಸ್ ಸ್ಥಾಪನೆಗಾಗಿ ರಾಜ್ಯ ಸರ್ಕಾರದಿಂದ ಸಾಕಷ್ಟು ಒತ್ತಡ ಹಾಕುತಿದ್ದೇವೆ. ಅನೇಕ ಬಾರಿ ಪತ್ರಗಳನ್ನು ಬರೆದಿದ್ದೇವೆ. ಅನೇಕ ನಿಯೋಗಗಳನ್ನ ತೆಗೆದುಕೊಂಡು ಹೋಗಿದ್ದೇವೆ. ಕೇಂದ್ರ ಸರ್ಕಾರವು ಇದಕ್ಕೆ ಸ್ಪಂದಿಸುತ್ತದೆ ಎಂಬ ಆಶಾಭಾವನೆಯೊಂದಿಗೆ ತಾವು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಇಡೀ ಕರ್ನಾಟಕ ಜನರ ಪರವಾಗಿ ಒತ್ತಾಯ ಮಾಡುವುದಾಗಿ ಸಚಿವರು ತಿಳಿಸಿದರು.

ನಾವು ರೈತರ ಬೇಡಿಕೆಗೆ ಸ್ಪಂದನೆ ನೀಡುತ್ತಿದ್ದೇವೆ. ಜಿಲ್ಲೆಯ ಹತ್ತಿ ಬೆಳೆಗಾರರಿಗೆ ಸ್ಪಂದನೆ ನೀಡಿದ್ದೇವೆ. ರಾಯಚೂರು ಜಿಲ್ಲೆಯಲ್ಲಿ ಹತ್ತಿ ಬೆಳೆಯ ಸಮೀಕ್ಷೆ ಚಾಲ್ತಿಯಲ್ಲಿದೆ. ಹಾನಿ ಅನುಭವಿಸಿದ ಹತ್ತಿ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹತ್ತಿ ಖರೀದಿ ಪ್ರಕ್ರಿಯೆ ಜಿಲ್ಲೆಯಲ್ಲಿ ಆರಂಭವಾಗಿದೆ. ಎಫ್.ಎ.ಕ್ಯೂ ಗುಣಮಟ್ಟದ ಹತ್ತಿಯ ಬೆಂಬಲ ಬೆಲೆಯು ಮಧ್ಯಮ ಎಳೆಗೆ ಪ್ರತಿ ಕ್ವಿಂಟಲ್‍ಗೆ 7,710 ರೂ ಮತ್ತು ಉದ್ದನೆಯ ಎಳೆಗೆ ಪ್ರತಿ ಕ್ವಿಂಟಲ್ ಗೆ 8,110 ರೂ ನಿಗದಿಪಡಿಸಲಾಗಿದೆ. ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, ಹತ್ತಿ ಬೆಳೆಯುವ ರೈತರು ಈ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಯೋಜನೆ ಪಡೆಯಬೇಕು ಎಂದು ಸಚಿವರು ಮನವಿ ಮಾಡಿದರು.

ನಮ್ಮ ರಾಜ್ಯ ಸರ್ಕಾರವು ಮಾತಿನಂತೆ ಐದು ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವಲ್ಲಿ ಯಶಸ್ಸು ಆಗಿದ್ದು, ಈ ಬಗ್ಗೆ ನಮಗೆ ವಿಶೇಷವಾದ ಹೆಮ್ಮೆಯಿದೆ ಎಂದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಅತ್ಯುತ್ತಮವಾದ ಆಡಳಿತ ನೀಡಿ ಜನತೆಗೆ ಸ್ಪಂದನೆ ನೀಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದಾರೆ ಎಂದರು.

ನಮ್ಮ ರಾಜ್ಯಕ್ಕೆ 'ಕರ್ನಾಟಕ' ಎಂದು ಮರು ನಾಮಕರಣವಾಗಿ 2023ಕ್ಕೆ 50 ವರ್ಷ ಪೂರ್ಣಗೊಂಡಾಗ ರಾಜ್ಯ ಸರ್ಕಾರವು ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕದ ಇತಿಹಾಸ ಕಲೆ, ಸಾಹಿತ್ಯ, ಸಂಸ್ಕøತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವಜನತೆಯಲ್ಲಿ ಕನ್ನಡ, ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಯೋಜನೆ ಹಮ್ಮಿಕೊಂಡು ಯಶಗೊಳಿಸಿದ ಸಾಧನೆ ನಮ್ಮದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್‍ಸಿಂಗ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ರಾಯಚೂರು ತಹಸೀಲ್ದಾರ ಸುರೇಶ್ ವರ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸೇರಿದಂತೆ ಸಂಘಟನೆಗಳ ಮುಖಂಡರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande