ಕನ್ನಡೇತರರಿಗೆ ಕನ್ನಡ ಕಲಿಸಲು ಪಣ ತೊಡಿ : ಸಚಿವ ಲಾಡ್ ಕರೆ
ಧಾರವಾಡ, 01 ನವೆಂಬರ್ (ಹಿ.ಸ.) : ಆ್ಯಂಕರ್ : 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಾವೆಲ್ಲರೂ ಕನ್ನಡ
Lad


ಧಾರವಾಡ, 01 ನವೆಂಬರ್ (ಹಿ.ಸ.) :

ಆ್ಯಂಕರ್ : 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಾವೆಲ್ಲರೂ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರ ಮಾಡುತ್ತೇನೆ ಮತ್ತು ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ ಎಂದು ಪಣ ತೊಡೋಣ. ಕನ್ನಡ ಪ್ರೀತಿ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಿರಬಾರದು ಎಂದು ಕರೆ ನೀಡಿದರು.

ಸಚಿವರು ರಾಜ್ಯದ ಇತಿಹಾಸ, ಏಕೀಕರಣ ಚಳವಳಿ ಹಾಗೂ ಕನ್ನಡ ಸಾಹಿತ್ಯದ ಮಹನೀಯರನ್ನು ಸ್ಮರಿಸಿ, ಬೇಂದ್ರೆ, ಕುವೆಂಪು, ಬಸವಣ್ಣ, ಅಕ್ಕಮಹಾದೇವಿ ಮೊದಲಾದವರ ಕೊಡುಗೆ ಕನ್ನಡ ನಾಡಿನ ಶಾಶ್ವತ ಪ್ರೇರಣೆಯಾಗಿದೆಯೆಂದರು.

ಸಚಿವರು ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಪ್ರೊ. ರವೀಂದ್ರ ಕೋರಿಶೆಟರ್ ಹಾಗೂ ಚಿತ್ರಕಲಾವಿದ ಬಿ. ಮಾರುತಿ ಅವರಿಗೆ ಅಭಿನಂದನೆ ಸಲ್ಲಿಸಿದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande