ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು
ಮುಂಬಯಿ, 01 ನವೆಂಬರ್ (ಹಿ.ಸ.) : ಆ್ಯಂಕರ್ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರನ್ನು ಉಸಿರಾಟದ ತೊಂದರೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸುದ್ದಿ ಹೊರಬಂದ ಕೂಡಲೇ ಅಭಿಮಾನಿಗಳಲ್ಲಿ ಆತಂಕ ವ್ಯಕ್ತವಾಗಿದೆ, ಆಸ್ಪತ್ರೆ ಮೂಲಗಳು ಮತ್ತು ಕುಟುಂಬದವರು ಅವರ ಆರೋಗ್ಯ
Darmendra


ಮುಂಬಯಿ, 01 ನವೆಂಬರ್ (ಹಿ.ಸ.) :

ಆ್ಯಂಕರ್ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರನ್ನು ಉಸಿರಾಟದ ತೊಂದರೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸುದ್ದಿ ಹೊರಬಂದ ಕೂಡಲೇ ಅಭಿಮಾನಿಗಳಲ್ಲಿ ಆತಂಕ ವ್ಯಕ್ತವಾಗಿದೆ, ಆಸ್ಪತ್ರೆ ಮೂಲಗಳು ಮತ್ತು ಕುಟುಂಬದವರು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೂಲಗಳ ಪ್ರಕಾರ, 89 ವರ್ಷದ ಧರ್ಮೇಂದ್ರ ಅವರನ್ನು ಅಕ್ಟೋಬರ್ 31ರಂದು ಆಸ್ಪತ್ರೆಗೆ ದಾಖಲಿಸಲಾಯಿತು.

ಆಸ್ಪತ್ರೆಯ ವಕ್ತಾರರು, “ಧರ್ಮೇಂದ್ರ ಅವರ ಸ್ಥಿತಿ ಚಿಂತಾಜನಕವಲ್ಲ. ಅವರು ನಿರಂತರ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು, ಕೆಲವು ತಪಾಸಣೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಧರ್ಮೇಂದ್ರ ಅವರು ಮುಂದಿನ ತಿಂಗಳು ಡಿಸೆಂಬರ್ 8ರಂದು ತಮ್ಮ 90ನೇ ಹುಟ್ಟುಹಬ್ಬವನ್ನು ಆಚರಿಸಲಿದ್ದಾರೆ. ಅವರ ಆರೋಗ್ಯದ ಬಗ್ಗೆ ಸುದ್ದಿಯು ಹೊರಬಂದ ನಂತರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯ ಮತ್ತು ಪ್ರಾರ್ಥನೆಗಳ ಸುರಿಮಳೆ ಸುರಿಸುತ್ತಿದ್ದಾರೆ.

ಧರ್ಮೇಂದ್ರ ಇತ್ತೀಚೆಗೆ “ತೇರಿ ಬಾತೇ ಮೇ ಐಸಾ ಉಲ್ಜಾ ಜಿಯಾ” ಚಿತ್ರದಲ್ಲಿ ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ಜೊತೆ ಕಾಣಿಸಿಕೊಂಡಿದ್ದರು. ಅದಕ್ಕೂ ಮುನ್ನ ಅವರು “ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ” ಚಿತ್ರದಲ್ಲಿ ಅಮೋಘ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದರು.

ಅವರು ಶೀಘ್ರದಲ್ಲೇ ಬಿಡುಗಡೆಯಾಗಲಿರುವ “ಎಕ್ಕೀಸ್” ಚಿತ್ರದಲ್ಲಿಯೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಹಾಗೂ ಅಕ್ಷಯ್ ಕುಮಾರ್ ಅವರ ಸೋದರ ಸೊಸೆ ಸಿಮರ್ ಭಾಟಿಯಾ ಬಾಲಿವುಡ್ ಪ್ರವೇಶ ಮಾಡಲಿದ್ದಾರೆ.

ಧರ್ಮೇಂದ್ರ ಅವರು ಶೀಘ್ರವಾಗಿ ಚೇತರಿಸಿಕೊಂಡು ತಮ್ಮ ಹಳೆಯ ಉತ್ಸಾಹ ಮತ್ತು ನಗುವಿನೊಂದಿಗೆ ಮತ್ತೊಮ್ಮೆ ಪರದೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande