ಬಳ್ಳಾರಿ : ಶಾಲಾ -ಕಾಲೇಜು ಸಮಯಕ್ಕೆ ಸರಿಯಾಗಿ ಬಸ್‍ಗಾಗಿ ವಿದ್ಯಾರ್ಥಿಗಳಿಗೆ ಪ್ರತಿಭಟನೆ
ಬಳ್ಳಾರಿ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಎತ್ತಿನಬೂದಿಹಾಳ್, ಬುರ್ರನಾಯಕನಹಳ್ಳಿ ಮತ್ತು ಚರುಕುಂಟೆ ಗ್ರಾಮದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ವಿದ್ಯಾರ್ಥಿಗಳು ಎಐಡಿಎ ನೇತೃತ್ವದಲ್ಲಿ ಇಂದಿರಾ ಗಾಂಧಿ ವೃತ್ತದ
ಬಳ್ಳಾರಿ : ಶಾಲಾ -ಕಾಲೇಜು ಸಮಯಕ್ಕೆ ಸರಿಯಾಗಿ ಬಸ್‍ಗಾಗಿ ವಿದ್ಯಾರ್ಥಿಗಳಿಗೆ ಪ್ರತಿಭಟನೆ


ಬಳ್ಳಾರಿ : ಶಾಲಾ -ಕಾಲೇಜು ಸಮಯಕ್ಕೆ ಸರಿಯಾಗಿ ಬಸ್‍ಗಾಗಿ ವಿದ್ಯಾರ್ಥಿಗಳಿಗೆ ಪ್ರತಿಭಟನೆ


ಬಳ್ಳಾರಿ, 10 ನವೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಎತ್ತಿನಬೂದಿಹಾಳ್, ಬುರ್ರನಾಯಕನಹಳ್ಳಿ ಮತ್ತು ಚರುಕುಂಟೆ ಗ್ರಾಮದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ವಿದ್ಯಾರ್ಥಿಗಳು ಎಐಡಿಎ ನೇತೃತ್ವದಲ್ಲಿ ಇಂದಿರಾ ಗಾಂಧಿ ವೃತ್ತದಲ್ಲಿ (ಸಂಗಂ ವೃತ್ತದಲ್ಲಿ) ಸೋಮವಾರ ದಿಢೀರನೆ ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಎಐಡಿಎ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಎತ್ತಿನಬೂದಿಹಾಳ್, ಬುರ್ರನಾಯಕನಹಳ್ಳಿ ಮತ್ತು ಚರುಕುಂಟೆ ಗ್ರಾಮದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ವಿದ್ಯಾರ್ಥಿಗಳು ಒಗ್ಗೂಡಿ ಪ್ರತಿಭಟನೆ ನಡೆಸಿದ್ದಾರೆ. ಬಸ್ ತಡವಾಗಿ ಬಂದಲ್ಲಿ ಶಾಲಾ - ಕಾಲೇಜುಗಳಿಗೆ ವಿದ್ಯಾರ್ಥಿಗಳು ತಡವಾಗಿ ತಲುಪುತ್ತಾರೆ. ಕಾರಣ ಜನಪ್ರತಿನಿಧಿಗಳು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಕ್ಷಣವೇ ಗಮನ ನೀಡಿ, ಸಮಸ್ಯೆಯನ್ನು ಪರಿಹರಿಸಬೇಕು ಎಂದು ಕೋರಿದರು.

ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಳ್ಳಾರಿ ವಿಭಾಗದ ಅಧಿಕಾರಿಗಳು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವ ಸ್ಥಳಕ್ಕೆ ಆಗಮಿಸಿ, ವಿದ್ಯಾರ್ಥಿಗಳ ಅಹವಾಲು ಆಲಿಸಿ, ಶೀಘ್ರದಲ್ಲಿಯೇ ಸಮಸ್ಯೆಯನ್ನು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ, ಪ್ರತಿಭಟನೆಯನ್ನು ಕೈಬಿಡಲು ಮನವಿ ಮಾಡಿದರು. ಅಧಿಕಾರಿಗಳ ಭರವಸೆಯ ಮೇಲೆ ವಿಶ್ವಾಸದಿಂದ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.

ಎಐಡಿಎ ಜಿಲ್ಲಾ ಅಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷೆ ಎಂ. ಶಾಂತಿ ಮತ್ತು ವಿದ್ಯಾರ್ಥಿ ಮುಖಂಡರುಗಳಾದ ಶಿಲ್ಪಾ , ಸಂದೀಪ್, ದಿಲೀಪ್, ಪ್ರದೀಪ್ ಹಾಗೂ ಮೂರು ಹಳ್ಳಿಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande