
ರಾಯಚೂರು, 10 ನವೆಂಬರ್ (ಹಿ.ಸ.)
ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ಘಟಕ ವತಿಯಿಂದ, ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ನಾಳೆ ಬೆಳಗ್ಗೆ 10 ಗಂಟೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಕೃಷ್ಣಾ ಶಾವಂತಗೇರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆಯ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ವಿ.ವಿ.ಗಳ ಕುಲಪತಿಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ನೌಕರರ ಸಂಘದ ಪ್ರಮುಖ ಪದಾಧಿಕಾರಿಗಳು ಮತ್ತು ಘಟಕಗಳ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿದ್ದಾರೆ.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಆರೋಗ್ಯ ಸಂಜೀವಿನಿ ಯೋಜನೆ ಮತ್ತು ಎಚ್.ಆರ್.ಎಂ.ಎಸ್. 2.0 ಯೋಜನೆ ಕುರಿತು ವಿಶೇಷ ಕಾರ್ಯಗಾರ ಏರ್ಪಡಿಸಲಾಗಿದ್ದು, ನೌಕರರಿಗೆ ಹೊಸ ವ್ಯವಸ್ಥೆಗಳ ಬಗ್ಗೆಯು ತಾಂತ್ರಿಕ ಮಾರ್ಗದರ್ಶನ ನೀಡಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರಿಗೆ ಓಓಡಿ ಸೌಲಭ್ಯ ಇರುತ್ತದೆ ಆದ್ದರಿಂದ ರಾಯಚೂರು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಸ್ತ ಸರಕಾರಿ ನೌಕರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್