ದೆಹಲಿ ಸ್ಫೋಟ:ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭದ್ರತೆ ಬಲಪಡಿಸಲು ಮುಖ್ಯಮಂತ್ರಿ ನಿರ್ದೇಶನ
ಬೆಂಗಳೂರು, 10 ನವೆಂಬರ್ (ಹಿ.ಸ.): ಆ್ಯಂಕರ್:ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಕಾರ್‌ ಸ್ಫೋಟದಿಂದ ಹಲವರ ಸಾವಿನ ದುರ್ಘಟನೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. “ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮಾಧ್ಯಮ ಹೇಳಿಕೆ ಬಿಡುಗ
Cm


ಬೆಂಗಳೂರು, 10 ನವೆಂಬರ್ (ಹಿ.ಸ.):

ಆ್ಯಂಕರ್:ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಕಾರ್‌ ಸ್ಫೋಟದಿಂದ ಹಲವರ ಸಾವಿನ ದುರ್ಘಟನೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. “ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ದೆಹಲಿಯ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕರಿಗೆ ತೀವ್ರ ಕಟ್ಟೆಚ್ಚರ ವಹಿಸಲು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಲಪಡಿಸಲು ನಿರ್ದೇಶನ ನೀಡಿದ್ದಾರೆ.

ಗೃಹ ಇಲಾಖೆಗೆ ಜನರ ಸುರಕ್ಷತೆಯನ್ನು ಅತ್ಯಂತ ಪ್ರಾಮುಖ್ಯತೆಯಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. “ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಸಹ ಪೊಲೀಸರೊಂದಿಗೆ ಸಹಕರಿಸಬೇಕು” ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande