ದೆಹಲಿಯಲ್ಲಿ ಸ್ಫೋಟ : ಕರ್ನಾಟಕದಲ್ಲಿ ಕಟ್ಟೆಚ್ಚರಕ್ಕೆ ಡಿಜಿಪಿ ಸೂಚನೆ
ಬೆಂಗಳೂರು, 10 ನವೆಂಬರ್ (ಹಿ.ಸ.) : ಆ್ಯಂಕರ್ : ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ–1ರ ಬಳಿ ಸಂಭವಿಸಿದ ಭಯಾನಕ ಕಾರು ಸ್ಫೋಟದ ಹಿನ್ನೆಲೆಯಲ್ಲಿ ದೇಶದಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಈ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
DGP


ಬೆಂಗಳೂರು, 10 ನವೆಂಬರ್ (ಹಿ.ಸ.) :

ಆ್ಯಂಕರ್ : ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ–1ರ ಬಳಿ ಸಂಭವಿಸಿದ ಭಯಾನಕ ಕಾರು ಸ್ಫೋಟದ ಹಿನ್ನೆಲೆಯಲ್ಲಿ ದೇಶದಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಈ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಫೋಟ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಹೈಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಭದ್ರತೆ ಬಿಗಿಗೊಳಿಸಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರು ಎಲ್ಲಾ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಎಚ್ಚರಿಕಾ ಸೂಚನೆ ನೀಡಿದ್ದು, ಜನನಿಬಿಡ ಪ್ರದೇಶಗಳಲ್ಲಿ ನಿಗಾ ವಹಿಸಲು ಆದೇಶಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ. ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳು, ಐಟಿ ಪಾರ್ಕ್‌ಗಳು ಹಾಗೂ ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ತುರ್ತು ಪರಿಸ್ಥಿತಿಗೆ ತಕ್ಷಣ ಪ್ರತಿಕ್ರಿಯಿಸಲು ಕ್ಯೂಆರ್‌ಟಿ ಪಡೆಗಳನ್ನು ಸಜ್ಜುಗೊಳಿಸಲಾಗಿದೆ.

ಪೊಲೀಸರು ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಚಟುವಟಿಕೆ ಕಂಡುಬಂದರೆ ತಕ್ಷಣ ವರದಿ ಮಾಡಲು ಸಾರ್ವಜನಿಕರನ್ನು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರವೂ ಕೇಂದ್ರ ಗೃಹ ಸಚಿವಾಲಯದ ಸಂಪರ್ಕದಲ್ಲಿದ್ದು, ಪರಿಸ್ಥಿತಿಯ ಮೇಲೆ ನಿಗಾವಹಿಸುತ್ತಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande