
ಬೆಂಗಳೂರು, 10 ನವೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆ ಆರಂಭವಾಗಿದ್ದು, ರಾಜ್ಯ ಸರಕಾರದ ವಿರುದ್ದ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಮಾಹಿತಿಯ ಪ್ರಕಾರ, ಹಜ್ ಯಾತ್ರಿಕರನ್ನು ಬೀಳ್ಕೊಡಲು ಬಂದಿದ್ದ ಕೆಲವು ಪ್ರಯಾಣಿಕರು ಟರ್ಮಿನಲ್‌ನ ಒಳಭಾಗದಲ್ಲೇ ಗುಂಪಾಗಿ ನಿಂತು ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿಮಾನ ನಿಲ್ದಾಣದ ಸಿಬ್ಬಂದಿ ಘಟನೆಯನ್ನು ಗಮನಿಸಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಮಾನ ನಿಲ್ದಾಣದ ಆಡಳಿತದಿಂದ ಈ ಕುರಿತು ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಘಟನೆಯ ನಿಖರ ಹಿನ್ನೆಲೆ ಹಾಗೂ ಕ್ರಮಗಳ ಕುರಿತು ತನಿಖೆ ನಡೆಯುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa